Get Updates
Get notified of breaking news, exclusive insights, and must-see stories!

ನೇರ ಬಂಡವಾಳ ಹೂಡಿಕೆ (FDI) ಒಳಹರಿವು ಕುಸಿತ: ಎಂಬಿ ಪಾಟೀಲ್

ಬೆಂಗಳೂರು, ಜೂನ್ 02: ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ನೇರ ಬಂಡವಾಳ ಹೂಡಿಕೆ (FDI) ಒಳಹರಿವು ಕುಸಿದಿದೆ. ಕಳೆದ ಎರಡು ಮೂರು ವರ್ಷಗಳಿಂದ ಕರ್ನಾಟಕ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲಿ ಎಫ್‌ಡಿಐ ಕುಸಿದಿದೆ ಎಂದು ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಸಿದರು.

ಈ ಕುರಿತು ಪ್ರಕಟವಾದ ಅಂಕಿ ಅಂಶಗಳ ಮಾಹಿತಿಯನ್ನು ಹಂಚಿಕೊಂಡಿರುವ ಸಚಿವರು, ದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ ಎಂದು ಅವರು ಆರೋಪಿಸಿದರು. ಇದರೊಂದಿಗೆ ಜಾಗತಿಕವಾಗಿ ನಡೆದ ಒಂದಷ್ಟು ವಿದ್ಯಮಾನಗಳು ಕುಸಿತಕ್ಕೆ ಕಾರಣವಾಗಿವೆ.

Foreign Direct Investment Fell Down in Last 3 years in Across India Se MB Patil

FDI ಕುಸಿತ ಅಂಕಿ-ಅಂಶಗಳು

ಹಣಕಾಸು ವರ್ಷ 2023ರಲ್ಲಿ 71 ಶತಕೋಟಿ ಡಾಲರ್‌ಗಳಷ್ಟಿದ್ದ ದೇಶಿಯ ಎಫ್‌ಡಿಐ , ಹಣಕಾಸು ವರ್ಷ 2024 ರಲ್ಲಿ 70 ಶತಕೋಟಿ ಡಾಲರ್‌ಗೆ ಕುಸಿದಿದೆ. ಹಣಕಾಸು ವರ್ಷ 2020-21ರಲ್ಲಿ ₹4.42 ಲಕ್ಷ ಕೋಟಿ, 2021-22ರಲ್ಲಿ ₹4.37 ಲಕ್ಷ ಕೋಟಿ, 2022-23ರಲ್ಲಿ ₹3.67 ಲಕ್ಷ ಕೋಟಿ ಮತ್ತು 2023-24ರಲ್ಲಿ ₹3.47 ಲಕ್ಷ ಕೋಟಿಗೆ ಇಳಿದಿದೆ. ಕಳೆದ 4ವರ್ಷಗಳಲ್ಲಿ FDI ನಿರಂತರವಾಗಿ ಹೀಗೆ ಕುಸಿಯುತ್ತಲೇ ಸಾಗಿರುವುದರತ್ತ ಸಚಿವರು ಬೆಳಕು ಚೆಲ್ಲಿದ್ದಾರೆ.

ದೇಶದಲ್ಲಿ ಹೂಡಿಕೆಯಾಗುವ 'FDI 'ನಲ್ಲಿ ಬಹುಪಾಲು ಈಕ್ವಿಟಿ ಸ್ವರೂಪದಲ್ಲಿ ಇರುತ್ತದೆ. ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ FDI ಈಕ್ವಿಟಿ ಹೂಡಿಕೆಯು ಕಳವಳಕಾರಿ ಮಟ್ಟದಲ್ಲಿ ಇಳಿಕೆಯಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಹೂಡಿಕೆಯಲ್ಲಿನ ಇಳಿಕೆಯು ಶೇಕಡಾ 3 ರಷ್ಟು ಮಾತ್ರ ದಾಖಲಾಗಿದೆ. ಆದರೆ, ಅದಕ್ಕೂ ಮುಂಚಿನ 4 ಹಣಕಾಸು ವರ್ಷಗಳಲ್ಲಿನ ಇಳಿಕೆ ಪ್ರಮಾಣವು ಶೇ 25ಕ್ಕಿಂತಲೂ ಹೆಚ್ಚಿಗೆ ಇದೆ' ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ದೂರಿದ ಸಚಿವ

FDI ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿ ಇದ್ದ ರಾಜ್ಯವು ಈಗ 3ನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ಈ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣಗಳಾಗಿವೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಹೂಡಿಕೆಗೆ ಒಲವು ತೋರಿಸಿದ್ದ ವಿದೇಶಿ ಹೂಡಿಕೆದಾರರು ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಒತ್ತಾಸೆಯ ಮೇರೆಗೆ ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳತ್ತ ಮುಖ ಮಾಡಿರುವುದೂ ಇದಕ್ಕೆ ಕಾರಣ' ಎಂದು ಸಚಿವರು ವಿವರಿಸಿದ್ದಾರೆ.

Foreign Direct Investment Fell Down in Last 3 years in Across India Se MB Patil

ದೇಶದ ಪರಿಸ್ಥಿತಿಯೇ ಹೀಗಿದ್ದ ಮೇಲೆ ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ಆದರೆ, ಅದು ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ FDI ಪಾತಾಳಕ್ಕೆ ಇಳಿದಷ್ಟು ಆಗಿಲ್ಲ. 2023-24ರಲ್ಲಿ ಇಳಿಕೆ ಪ್ರಮಾಣ ಕಡಿಮೆ ಆಗಿದ್ದು, ಪರಿಸ್ಥಿತಿಯನ್ನು ಗಣನೀಯವಾಗಿ ಸುಧಾರಿಸಲು ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವು ರಚನಾತ್ಮಕವಾಗಿ ಕಾರ್ಯೋನ್ಮುಖವಾಗಿದೆ.

FDI ಆಕರ್ಷಿಸುವಲ್ಲಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸುವಲ್ಲಿ ರಾಜ್ಯ ಸರ್ಕಾರವು ಸರ್ವ ಪ್ರಯತ್ನ ಮಾಡುತ್ತಿದೆ ಎಂದರು.

FDI ಕುಸಿತ ತಡೆಯುವಲ್ಲಿ ವಿಫಲ

ಕರ್ನಾಟಕದಲ್ಲಿ ಎಫ್‌ಡಿಐಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ನವೋದ್ಯಮ ಹಾಗೂ ಐಟಿ ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳಿಗೆ ನಿದರ್ಶನಗಳಾಗಿವೆ. ಕೇಂದ್ರ ಸರ್ಕಾರದ ನೀತಿ ನಿರೂಪಣೆಯಲ್ಲಿನ ದೋಷಗಳ ಕೊಡುಗೆಯೂ ಗಮನಾರ್ಹವಾಗಿವೆ.

ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ (ಡಬಲ್ ಎಂಜಿನ್‌ ಸರ್ಕಾರ) FDI ಕುಸಿತ ತಡೆಗಟ್ಟಲು ಕ್ರಮ ಕೈಗೊಳ್ಳದಂತೆ ಪ್ರಭಾವ ಬೀರುವಲ್ಲಿ ವಿಫಲವಾಗಿರುವುದೂ ವೇದ್ಯವಾಗುತ್ತದೆ.

ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳತ್ತ ಹರಿಯುತ್ತಿದ್ದ FDI ಯನ್ನು ರಾಜ್ಯದತ್ತ ತಿರುಗುವಂತೆ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಯಾವುದೇ ರಚನಾತ್ಮಕ ಪ್ರಯತ್ನ ಮಾಡದಿರುವುದೇ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣವಾಗಿದೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಕರ್ನಾಟಕದಿಂದ ಹೂಡಿಕೆದಾರರ ಸೆಳೆಯುತ್ತಿದ್ದೇವೆ

ಪ್ರತಿಕೂಲತೆಗಳ ನಡುವೆಯೂ ರಾಜ್ಯವು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಯ ಆಕರ್ಷಕ ತಾಣವಾಗಿ ಗಮನ ಸೆಳೆಯುತ್ತಿದೆ. ಕರ್ನಾಟಕ ರಾಜ್ಯವು ವಿಶ್ವದಾದ್ಯಂತ ವಿವಿಧ ದೇಶಗಳ ಬಹುರಾಷ್ಟ್ರೀಯ ಕಂಪನಿಗಳಿಂದ ಬಂಡವಾಳ ಹೂಡಿಕೆಯನ್ನು ಆಯಸ್ಕಾಂತದಂತೆ ಸೆಳೆಯುತ್ತಿದೆ. ಜಾಗತಿಕವಾಗಿ ವಿದೇಶಗಳ ಹೂಡಿಕೆಯನ್ನು ರಾಜ್ಯ ಸರ್ಕಾರ ಸೆಳಯುವ ಸರ್ವ ಪ್ರಯತ್ನ ಮಾಡಿದೆ ಎಂದು ಹೇಳಿದರು.

₹1.13 ಲಕ್ಷ ಕೋಟಿ ಬಂಡವಾಳ ಆಕರ್ಷಣೆ

FDI ಕುಸಿತದ ಹೊರತಾಗಿಯು ರಾಜಕೀಯ ಕಾರಣಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್‌ ಸರ್ಕಾರವು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ FDI ಒಳಹರಿವು ಉತ್ತೇಜಿಸಲು ಅನೇಕ ಪ್ರಯತ್ನ ನಡೆಸಲಾಗುತ್ತಿದೆ.

ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ (2023-24) ಹಣಕಾಸು ವರ್ಷದಲ್ಲಿ ದೇಶಿ ಹಾಗೂ ವಿದೇಶಿ ಕಂಪನಿಗಳಿಂದ ₹1.13 ಲಕ್ಷ ಕೋಟಿ ಮೌಲ್ಯದ ಬಂಡವಾಳ ಹೂಡಿಕೆ ಆಕರ್ಷಿಸಿದೆ. ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ವಿದ್ಯುತ್ ಚಾಲಿತ (ಇವಿ) ವಾಹನಗಳ ಲಿಆನ್ ಬ್ಯಾಟರಿ ತಯಾರಿಕೆ, ಉಕ್ಕು ತಯಾರಿಕೆ ವಲಯ, ದತ್ತಾಂಶ ಕೇಂದ್ರಗಳ ಸ್ಥಾಪನೆ ಮತ್ತಿತರ ಹಲವಾರು ಕ್ಷೇತ್ರಗಳಲ್ಲಿ ಈ ಹೂಡಿಕೆ ಮೊತ್ತವು ರಾಜ್ಯಕ್ಕೆ ಹರಿದು ಬರುತ್ತಿದೆ ಎಂದು ತಮ್ಮ ಸರ್ಕಾರದ ಸಾಧನೆ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+