ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ
ಬೆಂಗಳೂರು, ನವೆಂಬರ್ 17 : ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶರಾಗಿದ್ದಾರೆ. ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ನಾಗಮಾರಪಲ್ಲಿ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು.
ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದಾಗಿ ಗುರುಪಾದಪ್ಪ ನಾಗಮಾರಪಲ್ಲಿ (74) ಮೃತಪಟ್ಟಿದ್ದಾರೆ. ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಕಲಾಪಕ್ಕೆ ಹಾಜರಾಗಿರಲಿಲ್ಲ. [ಬಿಜೆಪಿಗೆ ಸವಾಲು ಹಾಕಿದ ಗುರುಪಾದಪ್ಪ ನಾಗಮಾರಪಲ್ಲಿ]

ಮೂರು ಬಾರಿ ಸಚಿವರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಶಾಸಕರಾಗಿ ಮಾತ್ರವಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಬೀದರ್‌ನಲ್ಲಿ ಅಂತ್ಯಕ್ರಿಯೆ : ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ನಿವಾಸದಲ್ಲಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರು ಈ ಕುರಿತು ಕುಟುಂಬದವರಿಗೆ ಮಾಹಿತಿ ನೀಡಿದರು. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೃಯಯಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವಿಶೇಷ ವಿಮಾನದಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಮೃತದೇಹವನ್ನು ಬೀದರ್‌ಗೆ ತೆಗೆದುಕೊಂಡು ಹೋಗಲಾಗುತ್ತದೆ. ಬುಧವಾರ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬಿಎಸ್‌ವೈ ಜೊತೆ ಕೆಜೆಪಿ ಸೇರಿದ್ದರು : 7 ಬಾರಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದರು. ನಂತರ ಬಿಜೆಪಿ ಸೇರಿದ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಕೆಜೆಪಿ ಸೇರಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications