ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಅಕ್ಟೋಬರ್‌ನಲ್ಲಿ 7ನೇ ವೇತನ ಆಯೋಗ ರಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 6: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.

Formation of 7th Pay Commission in October: Chief Minister Basavaraj Bommai announcement

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವ 19 ಆದೇಶಗಳನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ನಾಗರೀಕ ಸೇವಾ ದಿನಾಚರಣೆ ಹೊರತುಪಡಿಸಿದರೆ ಬೇರಾವುದೇ ರಾಜ್ಯ ಸರ್ಕಾರ ತನ್ನ ನೌಕರರ ದಿನಾಚರಣೆ ಆಚರಿಸುತ್ತಿರುವುದು ನಮ್ಮ ಕರ್ನಾಟಕದಲ್ಲಿ ಮಾತ್ರ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.

ಅಲ್ಲದೆ, ಕೂಡಲೇ ಏಳನೇ ವೇತನ ಆಯೋಗವನ್ನು ಘೋಷಿಸಿ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರಿಗೆ ನೆರವಾಗುವಂತೆ ಹಾಗೂ ಕೊಡುಗೆ ಆಧಾರಿತ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿ ಹೊಸ ಪೀಳಿಗೆಯ ಎರಡೂವರೆ ಲಕ್ಷ ನೌಕರರ ಬಾಳಲ್ಲಿ ಬೆಳಕು ಮೂಡಿಸುವಂತೆ ಸಿ ಎಸ್ ಷಡಾಕ್ಷರಿ ಅವರು ಮುಖ್ಯಮಂತ್ರಿಯವರಲ್ಲಿ ಬೇಡಿಕೆ ಇಟ್ಟರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ತಮ್ಮ ಪ್ರಾ‌ಸ್ತಾವಿಕ ಭಾಷಣದಲ್ಲಿ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್ ಅವರು ಪ್ರಶಸ್ತಿ ಪುರಸ್ಕೃತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ ಎಸ್ ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿ ಗೌರವಿಸಿದರು.

Formation of 7th Pay Commission in October: Chief Minister Basavaraj Bommai announcement

ಈ ಮುನ್ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಪಿ ಹೇಮಲತಾ ಅವರು ಸ್ವಾಗತಿಸಿದರು.

ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸ್ವಾಗತ

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿಯವರ ಹೇಳಿಕೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ಹೃದಯಪೂರ್ವಕ ಸ್ವಾಗತಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

English summary
Chief Minister Basavaraja Bommai today announced that the Seventh Pay Commission will be constituted this October to revise the salary and other allowances of Karnataka state government employees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X