Pratap Simha: ಕಾಂಗ್ರೆಸ್ ಸೇರುವ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?
ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ನಾಮಕರಣ ಮಾಡುವ ವಿಚಾರಕ್ಕೆ ಬೆಂಬಲ ಸೂಚಿಸಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಚರ್ಚೆಗಳು ಕೂಡ ಎಲ್ಲೆಡೆ ನಡೆಯುತ್ತಿವೆ. ಈ ಬಗ್ಗೆ ಪ್ರತಾಪ್ ಸಿಂಹ ಅವರೇ ಸ್ಪಷ್ಟನೆ ನೀಡಿದ್ದಾರೆ.
ಮೈಸೂರು ಪಾಲಿಕೆಯು ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರು ನಾಮಕರಣ ಮಾಡಲು ಮುಂದಾಗಿದ್ದು, ಈ ಬಗ್ಗೆ ಪ್ರತಾಪ್ ಸಿಂಹ ಕೂಡ ಸಹಮತ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಅವರು ಮೈಸೂರಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಅವರ ಹೆಸರು ಇಡುವುದರಲ್ಲಿ ತಪ್ಪಿಲ್ಲ ಎನ್ನುವ ಮೂಲಕ ಸಂಚಲನ ಸೃಷ್ಟಿಸಿದ್ದರು.

ಇದರ ನಂತರ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಹಾಗಾಗಿಯೇ ಅವರು ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರತಾಪ್ ಸಿಂಹ, ನಾನು ಕಾಂಗ್ರೆಸ್ ಸೇರುವುದು ಸುಳ್ಳು, ನಾನು ಕಾಂಗ್ರೆಸ್ ಸೇರಲ್ಲ ಎಂದಿದ್ದಾರೆ.
ಕೆಆರ್‌ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೆ, ಬದಲಾವಣೆ ಮಾಡುವುದು ಬೇಡ ಎಂದೂ ಪ್ರತಾಪ್ ಸಿಂಹ ಯೂಟರ್ನ್ ಹೊಡೆದಿದ್ದಾರೆ. ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ. ಆ ರಸ್ತೆಗೆ ಯಾವುದೇ ಹೆಸರಿಲ್ಲ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಅವರ ಹೆಸರು ಇಡಲಿ ಎಂದು ಹೇಳಿದ್ದೆ. ಇದಕ್ಕೆ ನಾನು ಕಾಂಗ್ರೆಸ್ ಸೇರುತ್ತೇನೆ ಎಂದೆಲ್ಲ ವಂದಂತಿ ಹಬ್ಬಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ನನ್ನ ಮೇಲೆ ಕಳೆದ 3 ತಿಂಗಳಲ್ಲಿ 5 ಎಫ್‌ಐಆರ್ ಹಾಕಿದೆ. ನನ್ನ ಬದ್ಧತೆ ಪ್ರಶ್ನಿಸುವವರು ನನ್ನ ಟ್ರ್ಯಾಕ್ ರೆಕಾರ್ಡ್ ಒಮ್ಮೆ ನೋಡಿ ಎಂದು ವದಂತಿ ಹಬ್ಬಿಸಿದವರಿಗೆ ಟಾಂಗ್ ನೀಡಿದ್ದಾರೆ. ರಸ್ತೆಗೆ ಹೆಸರಿಡುವ ಈ ವಿಚಾರವನ್ನು ದೊಡ್ಡದು ಮಾಡುವುದು ಬೇಡ. ಇದನ್ನು ವಿವಾದ ಮಾಡುವುದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದೂ ಪ್ರತಾಪ್ ಸಿಂಹ ಯೂಟರ್ನ್ ಹೊಡೆದಿದ್ದಾರೆ.

ಮೈಸೂರಿಗೆ ಮಹಾರಾಜರ ಕೊಡುಗೆಯೂ ಸಾಕಷ್ಟಿದೆ. ಜನಪ್ರತಿನಿಧಿಗಳ ಕೊಡುಗೆಯೂ ಇದೆ. ಆದರೆ ಈಗಾಗಲೇ ಇಟ್ಟಿರುವ ಹೆಸರನ್ನು ಬದಲಾಯಿಸುವುದು ಬೇಡ. ಇದಕ್ಕೆ ಬದಲಾಗಿ ಯಾವುದಾದರೂ ಹೊಸ ಬಡಾವಣೆ ನಿರ್ಮಿಸಿ ಅದಕ್ಕೆ ಸಿದ್ದರಾಮಯ್ಯ ಅವರ ಹೆಸರು ಇಡಲಿ. ಯಾವುದಾದರೂ ರಸ್ತೆಗೆ ಸಿಎಂ ಹೆಸರಿಡಲಿ ಎಂದಿದ್ದಾರೆ. ಮುಡಾದಿಂದಲೇ ಈ ಕೆಲಸ ನಡೆದರೆ ಇದು ಇನ್ನೂ ಅರ್ಥಪೂರ್ಣವಾದದ್ದು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರನ್ನು ನಾನು ಸೈದ್ಧಾಂತಿಕವಾಗಿ ಈಗಲೂ ಮತ್ತು ಮುಂದೆಯೂ ವಿರೋಧಿಸುತ್ತೇನೆ. ಆದರೆ ರಸ್ತೆಗೆ ಅವರ ಹೆಸರು ಇಡುವ ವಿಚಾರದಲ್ಲಿ ಸಣ್ಣತನ ಬೇಡ ಎಂದಿದ್ದರು. ಮಹಾರಾಜರ ನಂತರವೂ ಅನೇಕ ಸಾಧಕರು ಮೈಸೂರಿನಲ್ಲಿ ಬಂದಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದರು. ಇದೀಗ ಅವರು ಯೂಟರ್ನ್ ಹೊಡೆದಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications