ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ಬಂಧನ: ಮಿತ್ರನ ಬೆಂಬಲಕ್ಕೆ ನಿಂತ ಎಚ್‌ಡಿಕೆ ಏನಂದರು?

|
Google Oneindia Kannada News

Recommended Video

ದೋಸ್ತಿ ಡಿಕೆಶಿ ಕಷ್ಟ ನೋಡಿ ಕುಮಾರಣ್ಣ ಹೇಳಿದ್ದೇನು..? | Oneindia Kannada

ಬೆಂಗಳೂರು, ಸೆಪ್ಟೆಂಬರ್ 4: ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಕುರಿತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿದೆ. ಡಿಕೆ ಶಿವಕುಮಾರ್ ಅವರ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾವುದೇ ಪ್ರತಿಪಕ್ಷ ಇರಬಾರದು ಎನ್ನುವುದೇ ಕೇಂದ್ರ ಸರ್ಕಾರ ಗುರಿಆಗಿದೆ. ಡಿ.ಕೆ.ಶಿವಕುಮಾರ್ ಅವರ ಬಂಧನದ ಉದ್ದೇಶ ಕೂಡ ಇದೇ ಆಗಿದೆ.

HD Kumaraswamy

ಕಳೆದ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿ, ಈಗ ಬಂಧನ ಮಾಡುವ ಅವಶ್ಯಕತೆ ಏನಿತ್ತು? ಕಾನೂನು ವ್ಯಾಪ್ತಿಯಲ್ಲಿ ಕ್ರಮ ತಗೆದುಕೊಳದೇ ಈ ರೀತಿ ಮಾಡುವುದು ತಪ್ಪು ಎಂದರು.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ಮಲ್ಲೇಶ್ವರಂನಲ್ಲಿ ಏನೇನು ಲೂಟಿ ಹೊಡೆದಿದ್ದಾರೆ.

ಡಿಕೆಶಿ ಬಂಧನ: ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆಡಿಕೆಶಿ ಬಂಧನ: ಸಿಎಂ ಯಡಿಯೂರಪ್ಪ ಹೇಳಿದ್ದು ಹೀಗೆ

ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ದ್ವೇಷ ರಾಜಕೀಯ ಮಾಡಲ್ಲ ಎನ್ನುತ್ತಿದ್ದಾರೆ. ಆದರೆ ನನ್ನ ವಿಚಾರದಲ್ಲಿ ಆಗುತ್ತಿರುವುದು ಏನು? ಫೋನ್ ಕದ್ದಾಲಿಕೆ ನಡೆದಿದೆ ಅಂತ ತನಿಖೆಗೆ ಆದೇಶ ನೀಡಿದ್ದಾರೆ.

ಯಾವ ತನಿಖೆ ಆದರೂ ಮಾಡಲಿ ಸಿಬಿಐ ಅಲ್ಲ, ಇಂಟರ್ ನ್ಯಾಷನಲ್ ಸಂಸ್ಥೆಯಿಂದ ತನಿಖೆ ಮಾಡಿಸಲಿ ನನಗೇನು ಭಯವಿಲ್ಲ ಎಂದು ಗುಡುಗಿದರು.
ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿರುವುದಿಷ್ಟು' ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ.

ಹಬ್ಬದ ಆಚರಣೆಗೂ ಅವಕಾಶ ನೀಡದೆ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ತಿಳಿಸಿದ್ದಾರೆ.

English summary
Former CM HD Kumaraswamy tweeted about the arrest of former minister DK Sivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X