ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೂ ನಾನೇ ಹೈಕಮಾಂಡ್: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

|
Google Oneindia Kannada News

ಬೆಂಗಳೂರು, ಜೂ. 18: ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆಯೊಂದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂಖ್ಯಾ ಬಲಕ್ಕೆ ಅನುಗುಣವಾಗಿ ಬಿಜೆಪಿಯಿಂದ ನಾಲ್ವರು, ಕಾಂಗ್ರೆಸ್‌ ಪಕ್ಷದಿಂದ ಇಬ್ಬರು ಹಾಗೂ ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

Recommended Video

MLC ಟಿಕೆಟ್ ಕೈ ತಪ್ಪಿದ್ದಕ್ಕೆ ಎಚ್ ವಿಶ್ವನಾಥ್ ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ | Siddaramaiah | H Vishwanath

ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ ಹಾಗೂ ಪ್ರತಾಪ್ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಪರಿಷತ್ ಸದಸ್ಯ ನಸೀರ್ ಅಹಮ್ಮದ್ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್‌ನಿಂದ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

ಒಮ್ಮತದ ಅಭ್ಯರ್ಥಿಗಳು

ಒಮ್ಮತದ ಅಭ್ಯರ್ಥಿಗಳು

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹಮ್ಮದ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಟಿಕೆಟ್‌ಗೆ ಸುಮಾರು 270 ಆಕಾಂಕ್ಷಿಗಳಿಂದ ಅರ್ಜಿಗಳು ಬಂದಿದ್ದವು. ನಾವು ಎಲ್ಲವನ್ನೂ ಹೈಕಮಾಂಡ್‌ಗೆ ಕಳುಹಿಸಿದ್ದೇವು. ಅಂತಿಮವಾಗಿ ಹೈಕಮಾಂಡ್ ಇಬ್ಬರನ್ನು ಆಯ್ಕೆ ಮಾಡಿದೆ. ನಜೀರ್ ಅಹಮ್ಮದ್ ಹಾಗೂ ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿದೆ. ಇಬ್ಬರು ಒಮ್ಮತದ ಅಭ್ಯರ್ಥಿಗಳು ಎಂದು ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಕಾರಣ

ಸಿದ್ದರಾಮಯ್ಯ ಕಾರಣ

ವಿಧಾನ ಪರಿಷತ್ ಬಿಜೆಪಿ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ, ಮಾಜಿ ಸಚಿವ ಎಚ್. ವಿಶ್ವನಾಥ್ ಅವರು, ನನಗೆ ಪರಿಷತ್ ಟಿಕೆಟ್ ಸಿಗದಿರುವುದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಆಗಿದೆ. ಅದನ್ನು ಸಮಯ ಬಂದಾಗ ರಾಜ್ಯದ ಜನತೆಗೆ ತಿಳಿಸುತ್ತೇನೆ. ಯಾರು ಷಡ್ಯಂತ್ರ ಮಾಡಿದ್ದಾರೆ ಎಂಬ ಬಗ್ಗೆ ಮುಂದೆ ಚರ್ಚೆ ಮಾಡುವವನಿದ್ದೇನೆ, ಜನರಿಗೆ ತಿಳಿಸುವವನಿದ್ದೇನೆ ಎಂದಿದ್ದಾರೆ.

ತಮಗೆ ಟಿಕೆಟ್ ತಪ್ಪಲು ಪರೋಪಕ್ಷವಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್‌ಡಿಕೆ ಕಾರಣ ಎಂದು ವಿಶ್ವನಾಥ್ ಹೇಳಿಕೆ ಕೊಟ್ಟಿದ್ದಾರೆ. ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬಿಜೆಪಿಗೂ ನಾನೇ ಹೈಕಮಾಂಡ್

ಬಿಜೆಪಿಗೂ ನಾನೇ ಹೈಕಮಾಂಡ್

ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂಬ ವಿಶ್ವನಾಥ್ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ಕೊಟ್ಟಿದ್ದಾರೆ. ನನ್ನಿಂದಲೇ ಅವರಿಗೆ ಟಿಕೆಟ್ ತಪ್ಪಿದೆ ಎಂದರೆ ನಾನೇ ಬಿಜೆಪಿ ಹೈಕಮಂಡ್ ಅಂದ ಹಾಗಾಯ್ತು.

ಮಾಜಿ ಸಚಿವ ಎಚ್. ವಿಶ್ವನಾಥ್ ಅವರ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡ್. ಬಿಜೆಪಿಯಲ್ಲಿಯೂ ನಾನು ಹೇಳಿದ ಹಾಗೇ ಕೇಳುತ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ವಿಶ್ವನಾಥ್‌ರಿಂದ ರಾಕ್ಷಸಿ ಸರ್ಕಾರ

ವಿಶ್ವನಾಥ್‌ರಿಂದ ರಾಕ್ಷಸಿ ಸರ್ಕಾರ

ವಿಶ್ವನಾಥ್ ಯಾವ ಸಂದರ್ಭದಲ್ಲಿ ಏನು ಹೇಳುತ್ತಾರೋ ಅವರಿಗೆ ಅರ್ಥ ಆಗಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ನನ್ನಿಂದ ಅವರಿಗೆ ಎಂಎಲ್‌ಸಿ ಟಿಕೆಟ್ ತಪ್ಪಿದೆ ಎಂಬುದು ಹಾಸ್ಯಾಸ್ಪದ. ಬಿಜೆಪಿ ಪಕ್ಷದಲ್ಲಿ ನಾನು ಪ್ರಭಾವ ಬೀರುತ್ತೇನೆ ಎಂದುಕೊಂಡಿದ್ದಾರೆ. ಆ ಭಾವನೆಗಾದರೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ,

ಕುಮಾರಸ್ವಾಮಿ ರಾಕ್ಷಸಿ ಆಡಳಿತ ಇತ್ತು ಅಂತ ಹೇಳಿದ್ದರು. ರೈತರ ಸಾಲಮನ್ನಾ ಮಾಡಿದ್ದು ರಾಕ್ಷಸಿ ಆಡಳಿತ? ವಿಶ್ವನಾಥ್ ಅವರು ಸೇರಿ ಬಿಜೆಪಿ ಅಧಿಕಾರಕ್ಕೆ ತಂದರು. ಬೀದಿ ಬದಿ ವ್ಯಾಪಾರಿಗಳನ್ನ ಬೀದಿಗೆ ತಂದಿದ್ದಾರೆ. ವಿಶ್ವನಾಥ್ ರಾಕ್ಷಸಿ ಸರ್ಕಾರ ತಂದಿದ್ದಾರೆ. ಬಿಜೆಪಿ ಸರ್ಕಾರ ಎಂತಹ ಸರ್ಕಾರ ಅಂತ ವಿಶ್ವನಾಥ್‌ರನ್ನೇ ಕೇಳಿ ಎಂದು ಎಚ್‌ಡಿಕೆ ವಿಧಾನಸೌಧದಲ್ಲಿ ಹೇಳಿಕೆ ಕೊಟ್ಟಿದ್ದಾರೆ.

English summary
Former CM Siddaramaiah given curios statement during the Legislative Council election,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X