SM Krishna: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಮಂತ್ರಿ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಾಲಗಿದೆ.
91 ವರ್ಷದ ಎಸ್‌ಎಂ ಕೃಷ್ಣ ಪದೇ ಪದೇ ಅನಾರೋಗ್ಯಕ್ಕೆ ಈಡಾಗುತ್ತಿದ್ದಾರೆ. ಸೋಮವಾರ (ಏಪ್ರಿಲ್ 29)ರಂದು ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನು ತಿಳಿದು ಬಂದಿಲ್ಲ. ಇನ್ನು ಇವರನ್ನು ಚಿಕಿತ್ಸೆ ಮಾಡುತ್ತಿರುವ ವೈದ್ಯರು ಮಾಜಿ ಮುಖ್ಯಮಂತ್ರಿಯವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವಾರ ಜ್ವರ, ಕೆಮ್ಮು ಎಸ್‌ಎಂ ಕೃಷ್ಣರಲ್ಲಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 22ರಂದು ವಿಠಲ ಮಲ್ಯಾ ರಸ್ತೆಯಲ್ಲಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೆ ಚಿಕಿತ್ಸೆ ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದರು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಎಸ್‌ಎಂ ಕೃಷ್ಣ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಆರೋಗ್ಯದ ಬಗ್ಗೆ ಇನ್ನು ಆಸ್ಪತ್ರೆಯಿಂದ ಯಾವುದೇ ಪ್ರಕಟಣೆ ಬಂದಿಲ್ಲ. ಇತ್ತೀಚಿನವರೆಗೆ ರಾಜಕೀಯದಲ್ಲಿ ಸಕ್ರೀಯವಾಗಿದ್ದ ಎಸ್‌ಎಂ ಕೃಷ್ಣ ಕಳೆದ ವಾರವೂ ಆಸ್ಪತ್ರೆಗೆ ದಾಖಲಾಗಿದ್ದರು.












Click it and Unblock the Notifications