SM Krishna: ಮಾಜಿ ಸಿಎಂ ಎಸ್‌ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು, ಅಕ್ಟೋಬರ್‌ 19: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಇಂದು (ಶನಿವಾರ) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಏಪ್ರಿಲ್ 29ರಂದು ಶ್ವಾಸಕೋಶ ಸಮಸ್ಯೆಯಿಂದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ತಿಂಗಳ ಕಾಲ ಸುದೀರ್ಘ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿರುವ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಆಸ್ಪತ್ರೆಯಿಂದ ಡಿಸ್ಮಾರ್ಜ್ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಎಸ್‌ ಎಂ ಕೃಷ ಅವರನ್‌ ಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.

Former CM And Karnataka Senior Politician SM Krishna hospitalized

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.

92 ವರ್ಷದ ಮಾಜಿ ಮುಖ್ಯಮಂತ್ರಿ ಎಸ್ ​ಎಂ​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಹಿರಿಯ ರಾಜಕಾರಣಿ ಎಸ್ ಎಂ​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್‌ ಸದಸ್ಯರಾದ ದಿನೇಶ್‌ ಗೂಳಿಗೌಡ ಅವರು ಎಸ್‌ ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ನಾಡಿನ‌ ಹಿರಿಯ ರಾಜಕೀಯ ಮುತ್ಸುದ್ದಿ ಎಸ್ ಎಂ ಕೃಷ್ಣ ರವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿರ ವಾಗಿದ್ದು, ಅವರನ್ನು ಡಾಕ್ಟರ್ ಸತ್ಯನಾರಾಯಣ ಹಾಗೂ ಸುನಿಲ್ ಕಾರಂತ್ ಅವರು ತಪಾಸಣೆ ನಡೆಸುತ್ತಿದ್ದಾರೆ. ಅವರು ಆರೋಗ್ಯವಾಗಿದ್ದು ಕೆಲವು ವೈದ್ಯಕೀಯ ಪರೀಕ್ಷೆ ಗಳ‌ ನಂತರ ಆಸ್ಪತ್ರೆ ಯಿಂದ ಬಿಡುಗಡೆ ಮಾಡಲಾಗುವುದು ಎಂದು ಮಣಿಪಾಲ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಎಸ್‌ ಎಂ ಕೃಷ್ಣರವರ ಹಿತೈಷಿಗಳು, ಅಭಿಮಾನಿಗಳು ಆತಂಕ‌ ಪಡುವ ಅವಶ್ಯಕತೆ ಇರುವುದಿಲ್ಲ ಎಂದಿದ್ದಾರೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್‌ ಮಾಡಿದ್ದು, ಅನಾರೋಗ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿಗಳು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಿ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲೆಂದು ಹಾರೈಸುತ್ತೇನೆ ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+