Gruha Lakshmi Scheme: ಗೃಹಲಕ್ಷ್ಮಿ ಯೋಜನೆ ಹಣದ ಕುರಿತು ಮಾಜಿ ಸಿಎಂ ಹೇಳಿದ್ದೇನು?

ಹುಬ್ಬಳ್ಳಿ, ಫೆಬ್ರವರಿ 22: ಗ್ಯಾರಂಟಿ ಯೋಜನೆಗಳು ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಗಳಾಗಿವೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣುಹಾಕುವ ಯೋಜನೆ. ಗೃಹ ಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹ ಲಕ್ಷ್ಮೀ ಯೋಜನೆ ಹಣ ಸಂಬಳವೆ ಅಂತಾ ಕೇಳುತ್ತಾರೆ. ಅದು ಗೌರವ ಧನ. ಪ್ರತಿ ತಿಂಗಳು ಕೊಟ್ಟಿಲ್ಲ ಅಂದರೆ ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ರಾಜ್ಯದಲ್ಲಿ ಹಣ ಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಮುಖ್ಯಮಂತ್ರಿಗಳು ಭಂಡತನದಿಂದ ಒಪ್ಪಿಕೊಳ್ಳುತ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೆ ಅಲ್ಲ‌, ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Former CM Basavaraj Bommai Reaction On Gruha Lakshmi Scheme

ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದು ಸಲಹೆ ನೀಡಿದರೆ, ಅದಕ್ಕೂ ಅವರಿಗೆ ಆಪತ್ತಿದೆ ಎಂದರೆ ಅವರ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ. ನಾವು ರಾಜ್ಯದ ಬಜೆಟ್ ಬಗ್ಗೆ ಮಾತನಾಡಿದರೆ, ಕೇಂದ್ರದ ಬಜೆಟ್ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಬಜೆಟ್ ಬಗ್ಗೆ ಸಂಪೂರ್ಣ ವಿವರ ಕೊಡಬೇಕು. ಕಳೆದ ವರ್ಷ ಯಾವುದಕ್ಕೆ ಎಷ್ಟು ಹಣ ಇಟ್ಟಿದ್ದರು, ಎಷ್ಟು ಖರ್ಚಾಗಿದೆ ಎನ್ನುವುದನ್ನು ಮಾಹಿತಿ ನೀಡಬೇಕು.

ನಾನಿದ್ದಾಗ ಪೂರಕ ಬಜೆಟ್ ಮಂಡನೆ ಮಾಡಿದ್ದೆ, ಇವರು ಬಂದ ಮೇಲೆ ಎರಡು ವರ್ಷದಿಂದಲೂ ಕೊರತೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಾವಿದ್ದಾಗ 77 ಸಾವಿರ ಕೋಟಿ ಸಾಲ ಪಡೆದು ಅದರಲ್ಲಿ ಅತಿ ಹೆಚ್ಚು ಬಂಡವಾಳ ವೆಚ್ಚ ಮಾಡುತ್ತಿದ್ದೇವು. ಕಾಂಗ್ರೆಸ್ ಅವಧಿಯಲ್ಲಿ ಬಂಡವಾಳ ವೆಚ್ಚ ಹೆಚ್ಚಾಗಿಲ್ಲ ಸಾಲ ಹೆಚ್ಚಾಗಿದೆ. 1.5 ಲಕ್ಷ ಕೋಟಿ ಸಾಲ ಎರಡೂ ವರ್ಷ ಮಾಡಿದ್ದಾರೆ. ಕಳೆದ ವರ್ಷ 15 ಸಾವಿರ ಕೋಟಿ ಸಾಲ ಹೆಚ್ಚುವರಿಯಾಗಿ ಮಾಡಿದ್ದಾರೆ. ಸಾಲದ ಶೂಲಕ್ಕೆ ತಳ್ಳುತ್ತಿರುವ ಬಗ್ಗೆ ಕೇಳಿದರೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅವರದೇ ನೆಚ್ಚಿನ ಗ್ಯಾರೆಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರೆ ಅವರ ಆರ್ಥಿಕ ಪರಿಸ್ಥಿತಿ ದಿವಾಳಿಗೆ ಅದೇ ಉತ್ತರ ಎಂದರು‌.

ಎಸ್ ಪಿಟಿಪಿಎಸ್ ಹಣ ಕಳೆದ ಎರಡು ವರ್ಷಗಳಿಂದ ದುರ್ಬಳಕೆ ಆಗುತ್ತಿದೆ. ಎಸ್ಸಿಪಿ ಟಿಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿರಿಸಿದ್ದ 25 ಸಾವಿರ ದಷ್ಟು ಹಣ ಬೇರೆ ಬೇರೆ ಯೋಜನೆಗೆ ಬಳಕೆ ಆಗಿದೆ. ಅಭಿವೃದ್ಧಿಗೆ ಹಣ ಕೊರತೆ ಆಗಿದೆ. ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಗೆ ಬರುವ ಹಣ ಸಹ ಬಿಡುಗಡೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಓಬಿಸಿ, ಎಸ್ ಸಿ. ಎಸ್ ಟಿ ಹಾಗೂ ಇತರ ಜನಸಾಮಾನ್ಯರ ಕಲ್ಯಾಣ ಅನುದಾನ ಬಿಡುಗಡೆ ಆಗಿಲ್ಲ.

ವಾಲ್ಮೀಕಿ ನಿಗಮದ ಹಗರಣ ಆದ ನಂತರ ಆ ಇಲಾಖೆಯಲ್ಲಿ ಏನು ಆಗುತ್ತಿದೆ. ಇಲಾಖೆಯ ಅನುದಾನ ಏನಾಗಿದೆ. ಯಾವ ಉದ್ದೇಶಕ್ಕೆ ಬಳಕೆ ಆಗಿದೆ. ಎಷ್ಟು ಉಳಿದಿದೆ, ಎಷ್ಟು ಹಣ ಬಳಕೆ ಆಗಿದೆ ಗೊತ್ತಿಲ್ಲ. ಎಸ್ ಸಿ ಹಾಗೂ ಎಸ್ ಟಿ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡತಾ ಇದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಜನರ ಬಳಿ ತೆಗೆದುಕೊಂಡು ಹೋಗಲಾಗುತ್ತಿದೆ. ಶೀಘ್ರದಲ್ಲೇ ನಮ್ಮ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ಹೋರಾಟದ ದಿನಾಂಕ ಪ್ರಕಟ ಮಾಡಲಾಗುವುದು. ಬಜೆಟ್ ಮುನ್ನ ಹೋರಾಟ ಮಾಡುವ ವಿಚಾರ ಸಹ ಇದೆ ಎಂದು ಹೇಳಿದರು.

ತಮ್ಮ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ದಿನೇಶ್ ಗುಂಡೂರಾವ್ ಗೆ ಕೊಟ್ಟ ಆರೋಗ್ಯ ಇಲಾಖೆ ಸರಿ ಮಾಡಲಿ. ನಾವು ಪಿಎಚ್ ಸಿ ಗಳನ್ನ ಉನ್ನತೀಕರಣಕ್ಕೆ ಏರಿಸಿದ್ದೇವೆ. ನಮ್ಮ ಕ್ಲೀನಕ್ ತೆರೆದವು ನಾಲ್ಕು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿದೆವು. ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ಕೊಟ್ಡಿದ್ದೇವು. ಇಂದು ಆರೋಗ್ಯ ಇಲಾಖೆ ಅತ್ಯಂತ ಕ್ಷೀಣ ಸ್ಥಿತಿಯಲ್ಲಿ ಇದೆ ಎಂದು ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+