ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿ ಯಾವಾಗ?: ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಹಾವೇರಿ, ಮೇ 31: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಈಗಾಗಲೇ ನೀಡಿರುವ ಗ್ಯಾರೆಂಟಿ ಯೋಜನೆಗಳ ಜಾರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸೇರಿದಂತೆ ಬಿಜೆಪಿ, ಜೆಡಿಎಸ್ ವರಿಷ್ಠರು ಯೋಜನೆಗಳ್ನು ಹೇಗೆ ಜಾರಿ ಮಾಡುತ್ತಾರೆ ಎಂದು ಕಾಯುತ್ತಿದ್ದಾರೆ.

ಬುಧವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಗ್ಯಾರಂಟಿ ಜಾರಿ ಕುರಿತು ಯಾವ ತೀರ್ಮಾನ ಕೈಗೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಮತ್ತೆ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಜಾರಿ ಬಗ್ಗೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ನೋಡೋಣ. ಅಲ್ಲಿಯವರೆಗೆ ಕಾಯೋಣ ಎಂದು ಹೇಳಿದ್ದಾರೆ.

Former CM Basavaraj Bommai

ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆ ಮಾಡಲಿ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸರ್ಕಾರ ಕೈಗೊಳ್ಳುವ ನೀರ್ಣಯದ ಬಗ್ಗೆ ಗೊತ್ತಾಗಲಿದೆ ಎಂದರು.

ಏನೇನು ಯೋಜನೆಳನ್ನು ಜಾರಿ ಮಾಡುತ್ತಾರೋ ಮಾಹಿತಿ ಇಲ್ಲ. ಯಾವುದಕ್ಕೆಲ್ಲ ಹೇಗೆ ಷರತ್ತುಗಳನ್ನು ವಿಧಿಸುತ್ತಾರೋ ಕಾದು ನೋಡಬೇಕಿದೆ. ಶುಕ್ರವಾರ ಈ ಬಗ್ಗೆ ಸಷ್ಟತೆ ದೊರೆಯುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡೋಣ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಸಿಎಂ ಮತ್ತು ಉಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದ ಪರಾಭವ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ ಮಾಡಿದರು. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಭೇಟಿಗಳೆಲ್ಲವು ಅದವರ ಪಕ್ಷದ ವಿಚಾರ ಎಂದಷ್ಟೇ ಹೇಳಿದರು.

Former CM Basavaraj Bommai

ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈ ಕುರಿತು ಮುಂದೆ ಏನು ಬದಲಾವಣೆಗಳು ಆಗುತ್ತವೆಯೋ ನೋಡಬೇಕು ಎಂದರು.

ರಾಜ್ಯದಲ್ಲಿ ಐದು ಗ್ಯಾರಂಟಿಗಳ ಬಗ್ಗೆಯೇ ಚರ್ಚೆ

ಸದ್ಯ ರಾಜ್ಯಾದ್ಯಂತ ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಅಂತಿಮ ನಿರ್ಧಾರ ನಡೆಸಲು ಕಾಂಗ್ರೆಸ್ ಬುಧವಾರ ಮಧ್ಯೆ ಸಂಪುಟ ಸಭೆ ನಡೆಸಿತೇ ವಿನಃ ಯಾವುದು ಅಂತಿಮಗೊಳ್ಳಲಿಲ್ಲ.

ಸಭೆಯಲ್ಲಿ ಎಲ್ಲ ಸಚಿವರೂ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಿಎಂ ಸಿದ್ದರಾಮಯ್ಯನವರ ಪರಮಾಧಿಕಾರಕ್ಕೆ ಬಿಟ್ಟಿದ್ದಾರೆ. ಇನ್ನೂ ಸಿದ್ದರಾಮಯ್ಯನವರು ಸಚಿವರುಗಳು ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದಾರೆ. ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಏನೇ ಅದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಯೋಜನೆಗಳನ್ನು ಜಾರಿ ಮಾಡಿಯೇ ತೀರುತ್ತದೆ. ಈ ಸಂಬಂಧ ಮತ್ತೊಮ್ಮೆ ಚರ್ಚಿಸಲು ಇದೇ ಶೂಕ್ರವಾರ ಜೂನ್ 2 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿ ತೀಮಾನಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಸಿಯಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+