ಅಭಿಮಾನಿಗಳು, ಕಾರ್ಯಕರ್ತರಿಗೆ ಆಸ್ಪತ್ರೆಯಿಂದ ಬಸವರಾಜ ಬೊಮ್ಮಾಯಿ ಮನವಿ

ಬೆಂಗಳೂರು, ಅಕ್ಟೋಬರ್ 17; ಆಸ್ಪತ್ರೆಗೆ ದಾಖಲಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಶಿಗ್ಗಾವಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, 'ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ' ಎಂದು ಹೇಳಿದ್ದಾರೆ.

ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಕಾರ್ಯಕರ್ತರಿಗೆ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. 'ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ' ಎಂದು ತಿಳಿಸಿದ್ದಾರೆ.

Former CM Basavaraj Bommai Request To Party Workers And Supporters

ಆಸ್ಪತ್ರೆಗೆ ಬರಬೇಡಿ; ಬಸವರಾಜ ಬೊಮ್ಮಾಯಿ ತಮ್ಮ ಪೋಸ್ಟ್‌ನಲ್ಲಿ, 'ಆತ್ಮೀಯರೇ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ' ಎಂದು ಬರೆದಿದ್ದಾರೆ.

'ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ' ಎಂದು ಕೇಳಿಕೊಂಡಿದ್ದಾರೆ.

'ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು' ಎಂದು ಪೋಸ್ಟ್‌ ಹಾಕಿದ್ದಾರೆ.

63 ವರ್ಷದ ಬಸವರಾಜ ಬೊಮ್ಮಾಯಿ ಸೋಮವಾರ ರಾತ್ರಿ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿವಿಧ ಪಕ್ಷದ ನಾಯಕರು ಬಸವರಾಜ ಬೊಮ್ಮಾಯಿ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿ ಹಾರೈಸಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, 'ಮೊಣಕಾಲು ನೋವು ನಿಮಿತ್ತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದರು.

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಟ್ವೀಟ್‌ ಮಾಡಿ, 'ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿ ಅವರು ಶೀಘ್ರ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದರು.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಟ್ವೀಟ್ ಮಾಡಿ, 'ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದರು.

ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಹೈಕಮಾಂಡ್ ಬಸವರಾಜ ಬೊಮ್ಮಾಯಿಯನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿತ್ತು. 2021ರ ಜುಲೈ 28ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

2023ರ ಮೇ ತಿಂಗಳಿನಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಸವರಾಜ ಬೊಮ್ಮಾಯಿ 100016 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಾರದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಪಿಯ ಹಲವು ನಾಯಕರು, ಶಾಸಕರು, ಮಾಜಿ ಸಚಿವರು ಟ್ವೀಟ್ ಮೂಲಕ ಬಸವರಾಜ ಬೊಮ್ಮಾಯಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಅವರು ಎಷ್ಟು ದಿನ ಆಸ್ಪತ್ರೆಯಲ್ಲಿರಬೇಕು? ಎಂದು ಆಸ್ಪತ್ರೆ ಇನ್ನೂ ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+