ಪಠ್ಯ ಪರಿಷ್ಕರಣೆಯ ದೊಡ್ಡ ಚಾಲೆಂಜ್; ಮಾಜಿ ಸಿಎಂ ಬೊಮ್ಮಾಯಿ ಸರ್ಕಾರದ ಬಗ್ಗೆ ಹೇಳಿದ್ದೇನು?

ಬೆಂಗಳೂರು,ಮೇ 30: ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು. ಜವಾಬ್ದಾರಿಯುತ ಸರ್ಕಾರ ಏನು ಮಾಡಲಿದೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರದ ಮೇಲೆ ಕೆಲವು ಹೊಸದಾಗಿ ಪಠ್ಯಗಳನ್ನು ಪರಿಚಯ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಸಮಿತಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಎನ್.ಇ.ಪಿ ಮೂಲಕ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ. ಎನ್.ಇ.ಪಿ ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ. ಎಲ್ಲಾ ತಜ್ಞರ ಅಭಿಪ್ರಾಯ ಪಡೆದು ಎನ್.ಇ.ಪಿ ಜಾರಿಗೆ ತರಲಾಗಿದೆ ಎಂದರು.

Former CM Basavaraj Bommai

ಇನ್ನು ಫ್ರೀ ಯೋಜನೆ ಘೋಷಣೆ ಜಾರಿ ಮಾಡದೆ ಇದ್ದರೆ ಕೆಲವರು ಕಾನೂನು ಹೋರಾಟ ಮಾಡಲಿದ್ದಾರೆ ಎನ್ನುವ ಎಚ್ಚರಿಕೆ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದವರೇ ಈ ರೀತಿ ಹೋರಾಟ ಮಾಡೋದಕ್ಕೆ ಹೇಳಿ, ಕೋರ್ಟ್ ನಲ್ಲಿ ಫ್ರೀ ಯೋಜನೆಗೆ ತಡೆ ತರುವ ತಂತ್ರ ಇದ್ದರೂ ಇರಬಹುದು. ಹೇಳಲಿಕ್ಕೆ ಆಗುವುದಿಲ್ಲ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರ್ಕಾರ ತನಿಖೆಗೆ ಆದೇಶಿಸಿರುವುದಕ್ಕೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ಇರಲಿ. ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು ಅಂತ. ನಾನೇ ಹಿಂದೆ ದೂರು ನೀಡಿದ್ದೆ. ಚುನಾವಣಾ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್‌ಐಆರ್ ಆಗಿರಲಿಲ್ಲ.

Former CM Basavaraj Bommai

ಹೊಸ ಸರ್ಕಾರ ಬಂದಿದೆ ಯಾವುದೇ ರೀತಿ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ದ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು. ಟಾರ್ಗೆಟ್ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಆಗಬಾರದು ಎಂದರು.

ಉಚಿತ ಯೋಜನೆಗಳ ಬಗ್ಗೆ ನಿನ್ನೆ ಸಿಎಂ ಸಭೆ ಮಾಡಿದ್ದಾರೆ. ಸುಧೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ. ಎಲ್ಲಾ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಟಿತ ಆಗಲಿದೆ. ಎಲ್ಲರಿಗೂ ಸಿಗುತ್ತದೆ ಅಂತ ಮೊದಲು ಆಶ್ವಾಸನೆ ನೀಡಿದ್ದಾರೆ. ಅತ್ತೆಗೋ, ಸೊಸೆ ಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಒಂದನೇ ತಾರೀಖು ಕ್ಯಾಬಿನೆಟ್ ಇದೆ. ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಆರ್ಥಿಕವಾಗಿ ಕಷ್ಟ ಅನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ. ಜನ ಈಗ ಅಧಿಕಾರ ಕೊಟ್ಟಿದ್ದಾರೆ. ಏನು ಮಾಡುತ್ತಾರೆ ಕಾದು ನೋಡೋಣ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+