ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮೇಕೆದಾಟು ಓಮಿಕ್ರಾನ್ ಸೋಂಕಿನ ಸಮಾರಾಧನೆ, ತಕ್ಷಣ ನಿಲ್ಲಿಸಿ'

|
Google Oneindia Kannada News

ಬೆಂಗಳೂರು, ಜ 12: "ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಇವರು ಪಾದಯಾತ್ರೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ "ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸರಕಾರವನ್ನು ಒತ್ತಾಯಿಸಿದ್ದಾರೆ.

"ಒಂದು ವೇಳೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಿಲ್ಲಿಸದಿದ್ದರೆ ಸರಕಾರವೇ ಕಠಿಣ ಕ್ರಮ ಕೈಗೊಂಡು ತಗೆದುಕೊಂಡು ಪಾದಯಾತ್ರೆ ನಿಲ್ಲಿಸಬೇಕು. ಕೋವಿಡ್ ಸೋಂಕು ಎಲ್ಲೆಲ್ಲೂ ವಿಜೃಂಭಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಆರೋಗ್ಯ-ಜೀವದ ಲೆಕ್ಕವಿಲ್ಲದ ರಾಜಕೀಯಕ್ಕಾಗಿ ಈ ಯಾತ್ರೆ ಕೈಗೊಂಡಿದೆ" ಎಂದು ಕುಮಾರಸ್ವಾಮಿ ಆರೋಪಿಸಿದರು.

ಕಾಂಗ್ರೆಸ್ ನಾಯಕರೇ ಪಾದಯಾತ್ರೆಯೊಂದಿಗೆ ಬೆಂಗಳೂರಿಗೆ ಬರಬೇಡಿ! ಕಾಂಗ್ರೆಸ್ ನಾಯಕರೇ ಪಾದಯಾತ್ರೆಯೊಂದಿಗೆ ಬೆಂಗಳೂರಿಗೆ ಬರಬೇಡಿ!

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರಿದ ಸರಕಾರಕ್ಕೂ ಚಾಟಿ ಬೀಸಿದೆ. ಸರಕಾರವು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನೀರಿನ ಹೆಸರಿನಲ್ಲಿ ನಡೆಯುತ್ತಿರುವ ಈ ದೊಂಬರಾಟ ನಿಲ್ಲಿಸಬೇಕು" ಎಂದು ಆಗ್ರಹಿಸಿದರು.

"ರಾಜ್ಯವ್ಯಾಪಿ ಕೋವಿಡ್ ವಿಜೃಂಭಿಸುತ್ತಿದೆ. ಸೋಂಕು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರಿಗೆ ಪಾಸಿಟವ್ ಆಗಿ ಅವರು ಆಸ್ಪತ್ರೆ ಸೇರಿಕೊಳ್ಳುತ್ತಿದ್ದಾರೆ. ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಪತ್ತೆಯಾಗುತ್ತದೆ. ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ" ಎಂದು ಕುಮಾರಸ್ವಾಮಿ ಎಚ್ಚರಿಸಿದರು.

ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ

ಕಳೆದ 4 ದಿನಗಳಿಂದ ಬಸ್ಸುಗಳಲ್ಲಿ ಜನರನ್ನು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ! ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ

"1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ಚರ್ಚೆ ಮಾಡುತ್ತೇನೆ. ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ. ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂತಹ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಲೇವಡಿ ಮಾಡಿದರು.

 ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ

ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ

ಇಂತಹ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ,
ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ" ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

 ಸರಕಾರ ತೋರಿದ ಉದಾರತೆ, ಔದಾರ್ಯ ಸಾಕು

ಸರಕಾರ ತೋರಿದ ಉದಾರತೆ, ಔದಾರ್ಯ ಸಾಕು

"ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡರು

Recommended Video

ಭಾರತಕ್ಕಿಂತ ಉತ್ತಮವಾಗಿದೆ ಪಾಕಿಸ್ತಾನದ ಆರ್ಥಿಕತೆ!! ನಿಜಾನಾ?? | Oneindia Kannada

English summary
Former CM H D Kumaraswamy Insisted Government To Stop Mekedatu Congress Padayatra. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X