'ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ಬ್ರೋಕರ್ ಸಿದ್ದರಾಮಯ್ಯ'

ಬೆಳಗಾವಿ, ಡಿ 22: ಅಯ್ಯೋ ನಾನು ಕುಮಾರಸ್ವಾಮಿಯ ಬಗ್ಗೆ ಮಾತನಾಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅವರ ಬಗ್ಗೆ ಮಾತನಾಡುವಷ್ಟು ಸಣ್ಣ ಮನಸ್ಸಿನವನು ನಾನಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ, ಇವರಿಬ್ಬರೂ, ಒಬ್ಬರ ಬಗ್ಗೆ ಇನ್ನೊಬ್ಬರು ಮಾತನಾಡುವುದಿಲ್ಲ ಎಂದು ಅದೆಷ್ಟೋ ಬಾರಿ ಹೇಳಿಕೆ ನೀಡಿದ್ದುಂಟು.

ಆದರೆ, ಇವರಿಬ್ಬರ ನಡುವಿನ ವಾಕ್ಸಮರಕ್ಕೆ ಕೊನೆಯೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯನವರ ವಿರುದ್ದ ಹರಿತವಾದ ಪದಪ್ರಯೋಗ ಮಾಡುತ್ತಿರುವ ಕುಮಾರಸ್ವಾಮಿಯವರು, ಸಿದ್ದರಾಮಯ್ಯನವರನ್ನು ಬ್ರೋಕರ್, ಕೃತಘ್ನ ಎಂದೆಲ್ಲಾ ಜರಿದಿದ್ದಾರೆ.

ಜೆಡಿಎಸ್ ಮುಳುಗುವ ಹಡಗು ಎಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಹೇಳಿಕೆಯನ್ನು ನೀಡಿದ್ದರು. ಅದಕ್ಕೆ, ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ಬ್ರೋಕರ್ ನೀವು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ ವಿಚಾರದಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ"ಎಂದು ಎಚ್‌ಡಿಕೆ ಟೀಕಿಸಿದ್ದಾರೆ. ಈಗ ಮಾಧ್ಯಮದವರ ಮೇಲೆ ಹೇರಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ. ಕುಮಾರಸ್ವಾಮಿಯವರು ಸಿದ್ದರಾಮಯ್ಯನವರ ಬಗ್ಗೆ ಟ್ವೀಟ್ ಮಾಡಿದ್ದು ಹೀಗಿದೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರನ್ನು ʼಗೊಬೆಲಪ್ಪʼ ಮತ್ತು ʼಬ್ರೋಕರಪ್ಪʼ ಎಂದು ಲೇವಡಿ ಮಾಡಿದ್ದಾರೆ.

'ಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ

"ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರ

ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರ

"ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ. ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ"ಎಂದು ಸಿದ್ದರಾಮಯ್ಯನವರ ವಿರುದ್ದ ವಾಕ್ ಪ್ರಹಾರವನ್ನು ಕುಮಾರಸ್ವಾಮಿ ನಡೆಸಿದ್ದಾರೆ.

ಈ ವ್ಯಕ್ತಿಗೆ ದೇವರಾಜ ಅರಸು ಹೆಸರೇಳುವ ಅರ್ಹತೆಯೇ ಇಲ್ಲ

ಈ ವ್ಯಕ್ತಿಗೆ ದೇವರಾಜ ಅರಸು ಹೆಸರೇಳುವ ಅರ್ಹತೆಯೇ ಇಲ್ಲ

"ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ. ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಸಿದ್ದರಾಮಯ್ಯನವರ ವಿರುದ್ದ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+