HD Kumaraswamy: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು!
ಬೆಂಗಳೂರು, ಆಗಸ್ಟ್ 30: ತೀವ್ರ ಜ್ವರ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು(ಬುಧವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಕೋಲಾರದ ಶ್ರೀನಿವಾಸಪುರದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು, ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಈ ಪರಿಣಾಮ ರೈತರೊಂದಿಗೆ ಮಾತನಾಡಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೋಲಾರ ಪ್ರವಾಸವನ್ನ ಕೈಗೊಂಡಿದ್ದರು. ಆದರೆ, ಆರೋಗ್ಯದಲ್ಲಿ ಏಕಾಏಕಿ ಏರುಪೇರಾದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದು, ಕೋಲಾರ ಪ್ರವಾಸ ರದ್ದಾಗಿದೆ.

ಇನ್ನೂ 2023 ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಸಹ ಪಕ್ಷದ ಪರ ರಾಜ್ಯಾದ್ಯಂತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದ ಜ್ವರ ಕಾಣಿಸಿಕೊಂಡು ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚುನಾವಣಾ ಫಲಿತಾಂಶದ ನಂತರ ವಿಶ್ರಾಂತಿಗಾಗಿ ವಿದೇಶಿ ಪ್ರವಾಸಕ್ಕೆ ಕುಟುಂಬದವರೊಂದಿಗೆ ಕುಮಾರಸ್ವಾಮಿ ತೆರಳಿದ್ದರು.












Click it and Unblock the Notifications