'ಮಾಡಿರುವ ಪಕ್ಷದ್ರೋಹಕ್ಕಾಗಿ ಕಾಂಗ್ರೆಸ್ ಯಾವಾಗ ಬಿಡುತ್ತೀರಿ ಸಿದ್ದರಾಮಯ್ಯ?'

ಬೆಂಗಳೂರು, ಡಿಸೆಂಬರ್ 19: ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲು, ಸಮ್ಮಿಶ್ರ ಸರ್ಕಾರದಲ್ಲಿನ ತಮ್ಮ ಆಡಳಿತ ಮುಂತಾದವುಗಳ ಕುರಿತಂತೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಾರವಾದ ಪ್ರಕ್ರಿಯೆ ನೀಡಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ನಿಮ್ಮ ಸಾಮರ್ಥ್ಯದಿಂದ ಮೊದಲು ಹತ್ತು ಸ್ಥಾನ ಗೆದ್ದು ತೋರಿಸಿ, ಬಳಿಕ ಜೆಡಿಎಸ್ ಬಗ್ಗೆ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಂದೆ ಓದಿ.

ಬಾದಾಮಿಯಲ್ಲಿ ಬಿಡುತ್ತಿದ್ದೆವೇ?

ಬಾದಾಮಿಯಲ್ಲಿ ಬಿಡುತ್ತಿದ್ದೆವೇ?

ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು, ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು, ಬಾದಾಮಿಯಲ್ಲಿ ಗೆಲ್ಲದೇ ಹೋಗಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದೆವೆ?

ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು

ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು

2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್‌ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ.

ಪಕ್ಷದ್ರೋಹಕ್ಕಾಗಿ ಕಾಂಗ್ರೆಸ್ ಬಿಡಬೇಕು

ಪಕ್ಷದ್ರೋಹಕ್ಕಾಗಿ ಕಾಂಗ್ರೆಸ್ ಬಿಡಬೇಕು

2013ರ ಚುನಾವಣೆಯತ್ತ ಅವರು ಒಮ್ಮೆ ನೋಡಲಿ. ಆಗ ಅವರು ಯಾರನ್ನೆಲ್ಲ ಸೋಲಿಸಿದ್ದರು, ಕೊರಟಗೆರೆಯಲ್ಲಿ ಯಾರೊಂದಿಗೆ ಒಳಒಪ್ಪಂದ ಮಾಡಿಕೊಂಡು, ಯಾರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದರು ಎಂಬುದನ್ನು ಮನನ ಮಾಡಿಕೊಳ್ಳಲಿ. 2013ರ ಚುನಾವಣೆಯನ್ನು ಪರಾಮರ್ಶಿಸಿದರೆ, ಪಕ್ಷದ್ರೋಹದ ಆಧಾರದ ಮೇಲೆ ಅವರು ಕಾಂಗ್ರೆಸ್‌ ಬಿಡಬೇಕು! ಇದು ಅವರ ದ್ವಂದ್ವ.

ನೀವು ಕಾಂಗ್ರೆಸ್ ಬಿಡುವುದು ಯಾವಾಗ?

ನೀವು ಕಾಂಗ್ರೆಸ್ ಬಿಡುವುದು ಯಾವಾಗ?

ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು ಎಂದು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತುರನಾಗಿದ್ದೇನೆ.

ದ್ವಂದ್ವ ಎದ್ದು ಕಾಣಿಸುತ್ತದೆ

ದ್ವಂದ್ವ ಎದ್ದು ಕಾಣಿಸುತ್ತದೆ

2018ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ?

ಅವರ ಬೆಂಬಲಿಗರಲ್ಲವೇ?

ಅವರ ಬೆಂಬಲಿಗರಲ್ಲವೇ?

ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ದವನದಲ್ಲಿ ಕುಳಿತು ಸರ್ಕಾರ ಬೀಳಿಸುವ ಚರ್ಚೆ ನಡೆಸಿದವರು ಸಿದ್ದರಾಮಯ್ಯ ಅಲ್ಲವೇ? ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದು ಅವರ ಕಪಟ ನೀತಿ.

ಬಾದಾಮಿಯ ಕಾಮಗಾರಿ ಎಲ್ಲಿಯದು?

ಬಾದಾಮಿಯ ಕಾಮಗಾರಿ ಎಲ್ಲಿಯದು?

ಕುಮಾರಸ್ವಾಮಿ ಸಿಎಂ ಆಗಿ ಕಚೇರಿಗೇ ಬರುತ್ತಿರಲಿಲ್ಲವಂತೆ, ತಾಜ್‌ವೆಸ್ಟ್‌ಎಂಡ್‌ನಲ್ಲಿ ಇರುತ್ತಿದ್ದರಂತೆ. ಅಹೋರಾತ್ರಿ ಜನತಾ ದರ್ಶನ ತಾಜ್‌ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿತ್ತೋ? ಸಿಎಂ ಕಚೇರಿಯಲ್ಲಿ ನಡೆಯುತ್ತಿತ್ತೋ ಸಿದ್ದರಾಮಯ್ಯನವರೇ? ಬಾದಾಮಿಯಲ್ಲಿ ಈಗ ನಡೆಯುತ್ತಿರುವ 1200 ಕೋಟಿ ಕಾಮಗಾರಿಗಳು ತಾಜ್‌ವೆಸ್ಟ್‌ಎಂಡ್‌ನದ್ದ?

ಸಂಜೆ ಮೇಲೆ ಅಜ್ಞಾತರಾಗುತ್ತಿದ್ದರು

ಸಂಜೆ ಮೇಲೆ ಅಜ್ಞಾತರಾಗುತ್ತಿದ್ದರು

ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ದರಾಮಯ್ಯ ಸರ್ಕಾರಿ ನಿವಾಸ ತೊರೆಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ದರಾಮಯ್ಯ, ರಾತ್ರಿ 12 ಗಂಟೆ ವರೆಗೆ ಕಚೇರಿಯಲ್ಲಿ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ?

ಜನಾದೇಶ ಒಪ್ಪುವವರಲ್ಲ

ಜನಾದೇಶ ಒಪ್ಪುವವರಲ್ಲ

37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ. ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ.

ಹತ್ತು ಸ್ಥಾನ ಗೆದ್ದು ತೋರಿಸಿ

ಹತ್ತು ಸ್ಥಾನ ಗೆದ್ದು ತೋರಿಸಿ

ಜೆಡಿಎಸ್‌ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ.

Recommended Video

    ಕೇವಲ 39 ಗಳಿಸಿ ಎಲ್ಲಾ ವಿಕೆಟ್ ಒಪ್ಪಿಸಿದ ನಮ್ಮ ಭಾರತ | Oneindia Kannada
    ಒಳ ಒಪ್ಪಂದಗಳ ಜನಕ ನೀವು

    ಒಳ ಒಪ್ಪಂದಗಳ ಜನಕ ನೀವು

    ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+