Cauvery Water : ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?: ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 17: ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿವರ್ಯರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ಪ್ರಶ್ನಿಸಿದ್ದಾರೆ.
ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?2/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 17, 2023
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ? ಎಂದು ಪ್ರಶ್ನಿಸಿದ್ದಾರೆ.
2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!!ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು,ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು ಎಂದು ಹೇಳಿದರು.
1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್ ಡಿ ದೇವೇಗೌಡ ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ತಿಳಿಸಿದರು.
ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಹೇಳಿದರು.
ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ? ಎಂದು ಪ್ರಶ್ನಿಸಿದರು.
ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಕೇಳಿದರು.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಎಂದು ಹೇಳಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications