ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನರಿಗೆ ಮಳೆ ಸಂಕಷ್ಟ: ಬಿಜೆಪಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತಾ?

|
Google Oneindia Kannada News

ಬೆಂಗಳೂರು, ನ 20: ರಾಜ್ಯದ ನಾಲ್ಕು ದಿಕ್ಕಿನಲ್ಲಿ ಬಿಜೆಪಿ ಆರಂಭಿಸಿರುವ ಜನಸ್ವರಾಜ್ ಯಾತ್ರೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. "ಅಕಾಲಿಕ ಮಳೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ಹೊತ್ತಿನಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತಾ"ಎಂದು ಪ್ರಶ್ನಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಕುಮಾರಸ್ವಾಮಿ, "ಬಿಜೆಪಿಯವರು ಎಂಥದ್ದೋ ಶಂಖ ಊದೋಕೆ ಹೋಗಿದ್ದಾರೆ. ಶಂಖ ಊದಿದರೇ ಜನರಿಗೆ ಸ್ವರಾಜ್ಯ ಬರುತ್ತದಾ? ಇದರಿಂದ ರೈತರ ಸಮಸ್ಯೆ ಬಗೆಹರಿಯುತ್ತಾ" ಎಂದು ಕುಮಾರಸ್ವಾಮಿ ಮಾತಿನ ಪ್ರಹಾರ ನಡೆಸಿದ್ದಾರೆ.

ಲಂಚ..ಲಂಚ! ಬೊಮ್ಮಾಯಿ ಸರಕಾರದ ವಿರುದ್ದ ಪ್ರಧಾನಿಗೆ ಹೋಯಿತು ಇನ್ನೊಂದು ದೂರುಲಂಚ..ಲಂಚ! ಬೊಮ್ಮಾಯಿ ಸರಕಾರದ ವಿರುದ್ದ ಪ್ರಧಾನಿಗೆ ಹೋಯಿತು ಇನ್ನೊಂದು ದೂರು

"ರಾಜ್ಯದಲ್ಲಿ ಅನೇಕ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಸರ್ಕಾರದ ಅಂದಾಜಿನ ಪ್ರಕಾರ 7 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಚಿಕ್ಕಮಗಳೂರು ಕಡೆ ಕಾಫಿ ತೋಟಗಳು ಹಾಳಾಗಿವೆ. ರಾಯಚೂರು ಜಿಲ್ಲೆಯಲ್ಲಿ ಭತ್ತ ಕೆಸರಿನಲ್ಲಿ ಮುಚ್ಚಿ ಹೋಗಿದೆ. ಚಿತ್ರದುರ್ಗ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಎಲ್ಲಾ ಕಡೆ ಅನಾಹುತ ಆಗಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

"ಬೆಂಗಳೂರಿನಲ್ಲೂ ರಸ್ತೆಗಳು ಹಾಳಾಗಿವೆ, ಹಲವಾರು ಸಮಸ್ಯೆಗಳು ಎದುರಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ, ಸಚಿವರು ತ್ವರಿತವಾಗಿ ಪರಿಹಾರ ಕೆಲಸ ಮಾಡುವುದು ಬಿಟ್ಟು ಶಂಖ ಊದಿಕೊಂಡು ಹೋದರೆ ಹೇಗೆ? ಕೊರೊನಾ ಸಂಕಷ್ಟದಿಂದ ಜನರ ಬದುಕು ಏನಾಗಿದೆ? ಅವರು ಬದುಕು ದಯನೀಯವಾಗಿ ಬದಲಾಗಿದೆ. ಹೆಜ್ಜೆ ಹೆಜ್ಜೆಗೂ ರೈತರು ಕಷ್ಟದಲ್ಲಿದ್ದಾರೆ"ಎಂದು ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು ಜೆಡಿಎಸ್ ಮುಖಂಡರಿಗೆ ಮಹತ್ವದ ಸಂದೇಶ ರವಾನಿಸಿದ ಎಚ್‌ಡಿಕೆಬೆಂಗಳೂರು ಜೆಡಿಎಸ್ ಮುಖಂಡರಿಗೆ ಮಹತ್ವದ ಸಂದೇಶ ರವಾನಿಸಿದ ಎಚ್‌ಡಿಕೆ

 ಗೋ ಶಾಲೆಗಳಿಗೆ ಹಣ ನೀಡುವುದಕ್ಕೂ ಸರಕಾರಕ್ಕೆ ಆಗಿಲ್ಲ

ಗೋ ಶಾಲೆಗಳಿಗೆ ಹಣ ನೀಡುವುದಕ್ಕೂ ಸರಕಾರಕ್ಕೆ ಆಗಿಲ್ಲ

"ಸರಕಾರ ಮತ್ತು ಸಚಿವರು ಏನು ಮಾಡುತ್ತಿದ್ದಾರೆ. ಮಳೆ ಅನೇಕ ದಿನಗಳಿಂದ ಬೀಳುತ್ತಿದ್ದರೂ ಅವರು ಜನರ ಕಡೆ ತಲೆ ಹಾಕುತ್ತಿಲ್ಲ. ಗೋವಿನ ಸಂರಕ್ಷಣೆ ಮಾಡುತ್ತೇವೆ ಎಂದು ಸರಕಾರ ಹೇಳಿ ಎಲ್ಲ ಕಡೆ ಗೋಶಾಲೆಗಳನ್ನು ತೆರೆಯುತ್ತವೆ ಎಂದು ಹೇಳಿತ್ತು. ಈಗ ನೋಡಿದರೆ ಗೋಶಾಲೆಗಳನ್ನು ತೆರೆಯಲು ಕೇವಲ 25 ಕೋಟಿ ರೂಪಾಯಿ ಕೊಡಲಾಗುವುದು ಎಂದು ಹೇಳುತ್ತಿದ್ದಾರೆ. ಗೋ ಶಾಲೆಗಳಿಗೆ ಹಣ ನೀಡುವುದಕ್ಕೂ ಸರಕಾರಕ್ಕೆ ಆಗಿಲ್ಲ"ಎಂದು ಕುಮಾರಸ್ವಾಮಿ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

 ಬೆಳೆ ನಾಶದಿಂದ ಮೇವು ಕೊರತೆ ಉಂಟಾಗಿದೆ

ಬೆಳೆ ನಾಶದಿಂದ ಮೇವು ಕೊರತೆ ಉಂಟಾಗಿದೆ

"ಬೆಳೆ ನಾಶದಿಂದ ಮೇವು ಕೊರತೆ ಉಂಟಾಗಿದೆ. ಇದೆಲ್ಲಾ ಒಂದಕ್ಕೊಂದು ಚೈನ್ ಲಿಂಕ್ ಇದೆ. ಸ್ಥಳೀಯ ಮಟ್ಟದಲ್ಲಿ ಡಿಸಿಗಳು ಇಷ್ಟೊತ್ತಿಗೆ ಸಮೀಕ್ಷೆ ಮಾಡಬೇಕಿತ್ತು. ಅದಾವುದೂ ಆಗಿಲ್ಲ. ಶಂಕ ಊದಿಕೊಂಡು ಹೋದರೆ ಇದೆಲ್ಲ ಬಗೆಹರಿಯುತ್ತಾ? ಮೊದಲು ಸರಕಾರ ಕಮಿಷನ್ ಹೊಡೆಯುವ ಕೆಲಸಗಳನ್ನು ನಿಲ್ಲಿಸಬೇಕು. ಈ ಬಗ್ಗೆ ಯಾರೋ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಪರ್ಸಂಟೇಜ್ ವ್ಯವಹಾರ ಇನ್ನಾದರೂ ನಿಲ್ಲಿಸಬೇಕು" ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

 ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ

ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ

"ಕೇಂದ್ರ ಸರಕಾರದ ಮುಂದೆ ಅರ್ಜಿ ಇಡ್ಕೊಂಡು ಹೋದ್ರೆ ಆಗುತ್ತಾ? ಎಸ್ ಡಿಆರ್ ಎಫ್ ನಿಂದ ಕೂಡಲೇ ಹಣ ಬಿಡುಗಡೆ ಮಾಡಬೇಕು. ಕೂಡಲೇ ಜಿಲ್ಲಾ ಕೇಂದ್ರಗಳಲ್ಲಿ ಸಭೆಗಳನ್ನು ಮಾಡಿ, ಬೆಳೆ ಪರಿಹಾರ ನೀಡುವ ಬಗ್ಗೆ ತುರ್ತು ಕ್ರಮ ವಹಿಸಬೇಕು" ಎಂದು ಹೇಳಿರುವ ಕುಮಾರಸ್ವಾಮಿ, ಪರಿಷತ್ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, "ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಸೋಮವಾರ ಪ್ರಕಟಿಸಲಾಗುವುದು" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 ಕಾಂಗ್ರೆಸ್ ಪಕ್ಷವು ಬಿಜೆಪಿಯ ಸಿ ಟೀಂ ಆಗಿದ್ಯಾ ಎಂದು ಕುಮಾರಸ್ವಾಮಿ ವ್ಯಂಗ್ಯ

ಕಾಂಗ್ರೆಸ್ ಪಕ್ಷವು ಬಿಜೆಪಿಯ ಸಿ ಟೀಂ ಆಗಿದ್ಯಾ ಎಂದು ಕುಮಾರಸ್ವಾಮಿ ವ್ಯಂಗ್ಯ

"ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳಿಗೆ ಬರವಿಲ್ಲ. ಗೆಲ್ಲುವ ಶಕ್ತಿ ಇರುವವರು ಇದ್ದಾರೆ. ಆರರಿಂದ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡ್ತೇವೆ. ಕಾಂಗ್ರೆಸ್ ಬಿಜೆಪಿಯ ಅಸಮಾಧಾನಿತರಿಗೆ ಕಾದು ಕುಳಿತಿಲ್ಲ. ಈಗ ನಿರ್ಧಾರ ಮಾಡಿರುವ ಕ್ಷೇತ್ರಗಳಲ್ಲಿ ಬದಲಾವಣೆ ಇಲ್ಲ . ಮಂಡ್ಯ ಅಭ್ಯರ್ಥಿಯಾಗಿ ದಿನೇಶ್ ಗೂಳಿಗೌಡ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಸಚಿವರು ಒಬ್ಬರಿಗೆ ಸಹಾಯಕರಾಗಿದ್ದವರು. ನಂತರ ಬಿಜೆಪಿ ಸಚಿವರಿಬ್ಬರಿಗೆ ಸಹಾಯಕರಾಗಿದ್ದರು. ಅಂತಹವರನ್ನು ಕರೆದು ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಬಿಜೆಪಿಯ ಸಿ ಟೀಂ ಆಗಿದ್ಯಾ" ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Recommended Video

ರೈತರ ಕಾಯ್ದೆಗಳನ್ನು ಹಿಂಪಡೆದ ನರೇಂದ್ರ ಮೋದಿ | Oneindia Kannada

English summary
Former CM H D Kumaraswamy Criticized BJP's Jan Swaraj Yatra During Flood In State. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X