ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆ ವ್ಯಾಪಾರಕ್ಕೆ ಅನ್ವರ್ಥ ನಾಮವೇ 'ಕಾಂಗ್ರೆಸ್': ಕುಮಾರಸ್ವಾಮಿ ವಾಗ್ದಾಳಿ

|
Google Oneindia Kannada News

ಬೆಂಗಳೂರು, ಜುಲೈ 28: ಕಾಂಗ್ರೆಸ್ ನಡೆಸುತ್ತಿರುವ 'ಪ್ರಜಾಪ್ರಭುತ್ವ ಉಳಿಸಿ' ಹೋರಾಟದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಎಚ್ಡಿಕೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ಹೀಗಿದೆ:

Recommended Video

Corona ಮಹಿಳೆಯರಿಗಿಂತ ಪುರುಷರಲ್ಲಿ ಹೆಚ್ಚು | Oneindia Kannada

"ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ 'ಪ್ರಜಾಪ್ರಭುತ್ವ ಉಳಿಸಿ' ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ BSPಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ?"

'ಕೊರೊನಾ ಸಂಕಷ್ಟದಲ್ಲಿ ಜನರ ಹಿತ ಬದಿಗಿಟ್ಟು ಶಾಸಕ ಹಿತ ಕಾಪಾಡಿದ ಸರ್ಕಾರ''ಕೊರೊನಾ ಸಂಕಷ್ಟದಲ್ಲಿ ಜನರ ಹಿತ ಬದಿಗಿಟ್ಟು ಶಾಸಕ ಹಿತ ಕಾಪಾಡಿದ ಸರ್ಕಾರ'

"ಇದು ಖರೀದಿಯಲ್ಲವೇ? ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ?"

ಕೊರೊನಾ ಸೋಂಕಿಗೆ ಒಳಗಾಗಿರುವ ಕೆರೆ ಕಾಮೇಗೌಡ್ರ ಆರೋಗ್ಯ ಸ್ಥಿತಿ ಗಂಭೀರ: ಎಚ್ಡಿಕೆ ಟ್ವೀಟ್ಕೊರೊನಾ ಸೋಂಕಿಗೆ ಒಳಗಾಗಿರುವ ಕೆರೆ ಕಾಮೇಗೌಡ್ರ ಆರೋಗ್ಯ ಸ್ಥಿತಿ ಗಂಭೀರ: ಎಚ್ಡಿಕೆ ಟ್ವೀಟ್

"ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್, ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ?"

ಎರಡೂ ಪಕ್ಷಗಳೂ 'ಅಪರಾಧಿ'ಗಳೇ

ಎರಡೂ ಪಕ್ಷಗಳೂ 'ಅಪರಾಧಿ'ಗಳೇ

"ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ 'ಅಪರಾಧಿ'ಗಳೇ. ಎಸ್.ಎಂ.ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ?" - ಕುಮಾರಸ್ವಾಮಿ

ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು

ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು

"ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ?

2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. 'ಕುದುರೆ ವ್ಯಾಪಾರ' ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ಸಿನಿಂದ" - ಕುಮಾರಸ್ವಾಮಿ.

ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು

ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು

"ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ.‌ ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ. ಇದರತ್ತ ಚರ್ಚೆಗಳಾದರೂ ನಡೆಯಲಿ" - ಕುಮಾರಸ್ವಾಮಿ.

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ

ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ

"ಪ್ರಜಾಪ್ರಭುತ್ವ ಉಳಿಯಲಿ. ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೇಳುತ್ತಿದ್ದರು. ಸ್ವಾಮಿ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ" ಕುಮಾರಸ್ವಾಮಿ.

English summary
Former CM HD Kumaraswamy Criticized Congress Save Democracy Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X