JDS-BJP Alliance: ಜೆಡಿಎಸ್‌ ಜೊತೆ ಮೈತ್ರಿ ಎಂದ ಬಿಎಸ್ವೈ: ಬಿಜೆಪಿ ದೋಸ್ತಿ ಬಗ್ಗೆ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು,ಸೆಪ್ಟೆಂಬರ್‌ 09: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ, ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ ಎಂದರು.

Former Cm Hd Kumaraswamy First Reaction On Bjp Jds Alliance

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ, ಈ ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರಕಾರದ ವಿರುದ್ಧ ಸಂಘಟಿವಾಗಿ ಹೋರಾಟ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದು ಹೇಳಿದ ಅವರು, ಕೆಲವರು ಸಿದ್ದಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ. ವಿಶ್ವಾಸ, ಗೌರವ ಮುಖ್ಯ ಎಂದು ಹೇಳಿದರು.

Former Cm Hd Kumaraswamy First Reaction On Bjp Jds Alliance

ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು, ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಅಂತ ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಿರುಗೇಟು ನೀಡಿದರು.

ರಾಜ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ, ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ, ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ ಎಂದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಈಗಾಗಲೇ ಮುಖಂಡರ ಸಭೆ ನಡೆಸಿದ್ದೇವೆ. ಭಾನುವಾರ ಕೂಡ ಮಹತ್ವದ ಸಭೆ ಕರೆಯಲಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ ಇಂತಹ ಸಭೆ ನಡೆಯಬೇಕು ಎಂದು ದೇವೇಗೌಡರು ಬಯಸಿದ್ದರು. ಅದರಂತೆ ಸಭೆ ನಡೆಯುತ್ತಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುತ್ತಾರೆ. ಆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಸುತ್ತೇವೆ. ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ರಾಜಕಾರಣದಲ್ಲಿ ನಿರಾಶೆ, ಹತಾಶೆ ಎನ್ನುವುದು ಬರಲ್ಲ. ಡೆಸ್ಪರೇಟ್‌ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ. ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಪರೇಟ್‌ ಆಗುತ್ತದೆ. ಹೊರನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು. ಆದರೆ ಒಳಗಡೆ ಏನಿದೆ ಅನ್ನುವುದು ನನಗೂ ಗೊತ್ತಿದೆ. ಅವರ ಶಕ್ತಿ ಏನಿದೆ ಅನ್ನುವುದು ನನಗೂ ಗೊತ್ತಿದೆ. ರಾಜಕಾರಣದಲ್ಲಿ ಸದಾಕಾಲ ಒಂದೇ ರೀತಿ ಇರಲ್ಲ. ರಾಜಕಾರಣದ ಚಕ್ರ ಉರುಳುತ್ತಿರುತ್ತದೆ. ಅವರು ಏನು ಸಾಧನೆ ಮಾಡಿದ್ದಾರೆ ಅಂತ ಜನ ಸೀಟು ಕೊಡುತ್ತಾರೆ. ಲೂಟಿ ಮಾಡಿದ್ದಾರೆ, ಆ ಹಣದಲ್ಲಿ ಜನರನ್ನು ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ, ಅದು ಸಾಧ್ಯ ಆಗಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+