ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಅಶ್ವಥ್ ನಾರಾಯಣಗೆ ʼಹುಷಾರ್‌ʼ ಎಂದು ಎಚ್ಚರಿಕೆ ಕೊಟ್ಟ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಮೇ 11: "ತಾಕತ್ತು ಇದ್ದರೆ ಸಚಿವ ಡಾ.ಅಶ್ವಥ್ ನಾರಾಯಣ ಅವರು ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ"ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸವಾಲು ಎಸೆದರು.

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದ ವೇಳೆ ಗವಿಗಂಗಾಧರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕುಮಾರಸ್ವಾಮಿ, ಧರ್ಮದ ಹೆಸರಿನಲ್ಲಿ ಜನಾ ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಪ್ರಶ್ನಿಸಿದರು.

'ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ': ಕುಮಾರಸ್ವಾಮಿ'ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ': ಕುಮಾರಸ್ವಾಮಿ

ಧರ್ಮವನ್ನು ಮನೆಯಲ್ಲಿ ಇಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದ ಓಕುಳಿ ಹರಿಸುವುದು ಬೇಡ ಎಂದು ಯುವಕರಿಗೆ ಮನವಿ ಮಾಡಿದ ಕುಮಾರಸ್ವಾಮಿ, ಈಗಾಗಲೇ ಎರಡು ಬಾರಿ ನಾನು ನಮ್ಮ ತಂದೆ-ತಾಯಿಗಳ ಪುಣ್ಯದಿಂದ ಮುಖ್ಯಮಂತ್ರಿ ಆಗಿದ್ದೇನೆ. ಮತ್ತೆ ಸಿಎಂ ಆಗಬೇಕು ಅನ್ನೋದು ಮುಖ್ಯ ಅಲ್ಲ ಎಂದು ಸ್ಪಷ್ಟನೆಯನ್ನು ನೀಡಿದರು.

"ನನ್ನ ವಿರುದ್ಧ ಏನೇ ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಅವರ ರೀತಿ ಲೂಟಿ ಹೊಡೆದಿಲ್ಲ"ಎಂದು ಸಚಿವ ಅಶ್ವಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡುವಾಗ ಎಚ್ಚರ ಎಂದು ಹೇಳಿದರು.

ಮೇ.13ಕ್ಕೆ ನೆಲಮಂಗಲದಲ್ಲಿ ಜೆಡಿಎಸ್ ಜನತಾ ಜಲಧಾರೆ ರಥಯಾತ್ರೆ ಸಮಾರೋಪಮೇ.13ಕ್ಕೆ ನೆಲಮಂಗಲದಲ್ಲಿ ಜೆಡಿಎಸ್ ಜನತಾ ಜಲಧಾರೆ ರಥಯಾತ್ರೆ ಸಮಾರೋಪ

 ಹುಷಾರ್, ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ

ಹುಷಾರ್, ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ

"ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ಅಕ್ರಮ ಆಗಿದೆ. ನೀವು ನನ್ನ ಬಗ್ಗೆ ಮಾತನಾಡಿದರೆ ಹುಷಾರ್, ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ. ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಿ. ಲೂಟಿ ಮಾಡುತ್ತಿರುವವರು ಅವರು. ಅವರಿಗೆ ತಾಕತ್ತು ಇದ್ದರೆ ನಾಳೆ ಬೆಳಗ್ಗೆಯೇ ನನ್ನ ವಿರುದ್ಧದ ದಾಖಲೆ ಬಿಡುಗಡೆ ‌ಮಾಡಲಿ. ಅದಕ್ಕೆ ಉತ್ತರ ಕೊಡಲು ನಾನು ಸಿದ್ದ " ಎನ್ನುವ ನೇರ ಸವಾಲನ್ನು ಕುಮಾರಸ್ವಾಮಿಯವರು ಅಶ್ವಥ್ ನಾರಾಯಣ ಅವರಿಗೆ ಎಸೆದರು.

 ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆ

ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆ

"ಇಂದು ಬೆಳಗ್ಗೆ ಒಂದು ಚಾನಲ್ʼನಲ್ಲಿ ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆಯನ್ನು ನೋಡಿದ್ದೇನೆ. ಮಹಾಲಕ್ಷ್ಮಿ ಲೇಔಟ್ʼನಲ್ಲಿ ಖಾಸಗಿ ಶಾಲೆಯ ಅವ್ಯವಸ್ಥೆಯನ್ನು ಆ ವಾಹಿನಿ ಹೊರಗಿಟ್ಟಿದೆ. ಹಲವಾರು ಶಾಲೆಗಳಲ್ಲಿ ಇಂತಹ ವ್ಯವಸ್ಥೆ ಇದೆ. ಇಂತಹ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕೇ ಹೊರತು ಸಮಾಜವನ್ನು ಒಡೆಯಲು ಅಲ್ಲ. ಇಂತಹ ಸಮಸ್ಯೆಗಳನ್ನು ಗಮನಿಸಿಯೇ ನಾನು ಪಂಚತಂತ್ರ ಕಾರ್ಯಕ್ರಮಗಳಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇನೆ. ಕೂಡಲೇ ಆ ಶಾಲೆಯ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ನಾನು ಒತ್ತಾಯ ಮಾಡುತ್ತೇನೆ" ಎಂದು ಕುಮಾರಸ್ವಾಮಿ ಹೇಳಿದರು.

 ರವೀಂದ್ರನಾಥ್ ರಾಜೀನಾಮೆಯನ್ನು ಸರ್ಕಾರ ಅಂಗೀಕಾರ ಮಾಡಬಾರದು

ರವೀಂದ್ರನಾಥ್ ರಾಜೀನಾಮೆಯನ್ನು ಸರ್ಕಾರ ಅಂಗೀಕಾರ ಮಾಡಬಾರದು

"ಐಪಿಎಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆಯನ್ನು ಸರ್ಕಾರ ಅಂಗೀಕಾರ ಮಾಡಬಾರದು. ಸರ್ಕಾರದ ನಡವಳಿಕೆ ಖಂಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಅನೇಕ ಜನ ನಕಲಿ ಮೀಸಲಾತಿ ಸರ್ಟಿಫಿಕೇಟ್ ಪಡೆದಿದ್ದರು. ಇದನ್ನು ತನಿಖೆ ಮಾಡಲು ಹೋದರೆ ವರ್ಗಾವಣೆ ಮಾಡಿದ್ದಾರೆ"ಎಂದು ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದರು.

 ಸಿದ್ದರಾಮಯ್ಯಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ

ಸಿದ್ದರಾಮಯ್ಯಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ

"ಸಿದ್ದರಾಮಯ್ಯ ಅವಧಿಯಲ್ಲಿ ನಕಲಿ ದಾಖಲಾತಿ ಕೊಟ್ಟು ಪೊಲೀಸ್ ಅಧಿಕಾರಿಯಾಗಿದ್ದ ಕೆಂಪಯ್ಯ ಆಯಕಟ್ಟಿನ ಅಧಿಕಾರ ಪಡೆದಿದ್ದರು. ಅಂತಹವರಿಗೆ ಪೊಲೀಸ್ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದರು. ಸಿದ್ದರಾಮಯ್ಯಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಕೆಂಪಯ್ಯಗೆ ನೊಟೀಸ್ ಕೊಟ್ಟ ಎರಡು ದಿನಕ್ಕೆ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್- ಬಿಜೆಪಿ ಶಾಮೀಲಾಗಿವೆ"ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದರು.

English summary
Former CM H D Kumaraswamy Given Warning To Minister Ashwath Narayan. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X