ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು- ಮೈಸೂರು ಹೆದ್ದಾರಿ ಕಳಪೆ ಕಾಮಗಾರಿ ಬಗ್ಗೆ ಮಾಜಿ ಸಿಎಂ ಆಕ್ರೋಶ

|
Google Oneindia Kannada News

ಬೆಂಗಳೂರು, ಆ. 30: ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ?, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು!

ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು. ರಸ್ತೆ ತುಂಬಾ ಚೆನ್ನಾಗಿದೆ ಎಂದು ಪೋಟೋ ಹಾಕಿಸಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಹರಿಹಾಯ್ದರು.

 'ಮಾತು ಬಿಟ್ಟು ಕೆಲಸದಲ್ಲಿ ನಿನ್ನ ಪ್ರತಾಪ ತೋರಿಸು': ಪ್ರತಾಪ್ ಸಿಂಹಗೆ ಸಿದ್ದರಾಮಯ್ಯ ತರಾಟೆ! 'ಮಾತು ಬಿಟ್ಟು ಕೆಲಸದಲ್ಲಿ ನಿನ್ನ ಪ್ರತಾಪ ತೋರಿಸು': ಪ್ರತಾಪ್ ಸಿಂಹಗೆ ಸಿದ್ದರಾಮಯ್ಯ ತರಾಟೆ!

ಸೋಮವಾರ ಪ್ರತಾಪ ಸಿಂಹ ಅವರೇ ಸಂಗ ಬಸಪ್ಪನ ದೊಡ್ಡಿ ಹೈವೇಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.

Former CM HD Kumaraswamy invites MP Pratap Simha for swimming on Bengaluru Mysore highway

''ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು'' ಎಂದು ಮಾಜಿ ಮುಖ್ಯಮಂತ್ರಿಗಳು ಹರಿಹಾಯ್ದರು.

ನಿನ್ನೆ ಅವರೇ ಅವರೇ ಸಂಗಬಸಪ್ಪನದೊಡ್ಡಿ ಹೈವೆಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.

ಕೆರೆ ಒಡೆದಿದ್ದರಿಂದ ಈ ರೀತಿ ಪ್ರವಾಹ ಆಗಿದೆ ಎಂದು ಅವರು ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿ ಹೀಗೆ ಮಾತನಾಡುವುದಲ್ಲ. ಶಾಶ್ವತವಾದ ಕೆಲಸ ಆಗಬೇಕು. ಸರ್ಟಿಫಿಕೇಟ್ ಕೊಡೋದಕ್ಕಲ್ಲ ಇವರು ಇರುವುದು. ಕಾಮಗಾರಿ ತಪ್ಪಾಗಿದ್ದರೆ ಸರಿಪಡಿಸಬೇಕು. ಪ್ರತಾಪ್ ಸಿಂಹ ಬರೀ ಪ್ರಚಾರ ತೆಗೆದುಕೊಳ್ಳೋದು ನಿಲ್ಲಿಸಲಿ. ಮೊದಲು ಜನರ ಕೆಲಸ ಮಾಡಲಿ ಎಂದು ಅವರು ಟಾಂಗ್ ಕೊಟ್ಟರು.

Former CM HD Kumaraswamy invites MP Pratap Simha for swimming on Bengaluru Mysore highway

ಮೃತನ ಮನೆಗೆ ಭೇಟಿ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ರೂ. ನೆರವಿನ ಚೆಕ್ ನೀಡಿದರು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ನಿನ್ನೆಯ ದಿನ ಅವಘಡದಲ್ಲಿ ಬೋರೆಗೌಡರು ನಿಧನ ಹೊಂದಿದ್ದರು. ಅವರದ್ದು ಕಷ್ಟಪಟ್ಟು ಜೀವನ ಮಾಡುತ್ತಿರುವ ಕುಟುಂಬ. ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಮ್ಮ ಒಡನಾಟದಲ್ಲಿ ಬೋರೇಗೌಡರು ಇದ್ದರು. ನಮ್ಮ ಜತೆಗೂಡಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

English summary
Rain effect in Bengaluru Mysore express Highway: Former CM HD Kumaraswamy invites MP Pratap Simha for swimming on Bengaluru Mysore highway. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X