ರಮೇಶ್ ಕುಮಾರ್ ವಿರುದ್ದ ಅಕ್ಷರಶಃ ಬೆಂಕಿ ಉಗುಳಿದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 6: ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, "ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ"ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
"ಕೆಆರ್‌ಎಸ್, ಎತ್ತಿನಹೊಳೆ, ಕೆಸಿ ವ್ಯಾಲಿ, ಹೆಚ್‌ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ. ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ"ಎಂದು ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

"ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ" ಎಂದು ರಮೇಶ್ ಕುಮಾರ್ʼಗೆ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.
"3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಬೆಳಗಾವಿ ಅಧಿವೇಶನದಲ್ಲಿ ಲಜ್ಜೆಗೆಟ್ಟು ಆಡಿದ ಮಾತಿಗೆ ಸ್ವಪಕ್ಷದ ಶಾಸಕಿಯರಿಂದಲೇ ಛೀಮಾರಿ ಹಾಕಿಸಿಕೊಂಡ ಸ್ವಯಂ ಘೋಷಿತ ಸಂವಿಧಾನ ಪಂಡಿತರೇ, ಅಧಿವೇಶನದಲ್ಲಿ ಅದ ಗರ್ವಭಂಗವನ್ನು ಮರೆತಿರಾ"ಎಂದು ಕುಮಾರಸ್ವಾಮಿ ಕೆಂಡಕಾರಿದ್ದಾರೆ.

ಗಾಂಧಿಗಳ ಹೆಸರೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಯೂ ಸೇರಿದೆಯಾ?ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎನ್ನುವುದನ್ನು ದಾಸಶ್ರೇಷ್ಠ ಶ್ರೀ ಪುರಂದರದಾಸರು ನಿಮ್ಮಂತಹ ವಿಕಾರಿಗಳನ್ನು ನೋಡಿಯೇ ಈ ಪದವನ್ನು ಬರೆದಿರಬಹುದು" ಎಂದು ಕುಮಾರಸ್ವಾಮಿಯವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications