ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡ್; ಸಿಂಗಾಪುರ್ ಗೆ ತೆರಳಿದ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು,ಮೇ 11: ರಾಜ್ಯ ವಿಧಾನಸಭಾ ಚುನಾವಣೆಗೆ ಅಬ್ಬರ ಪ್ರಚಾರವನ್ನ ನಡೆಸಿ, ರಾಜ್ಯಾದ್ಯಂತ ಭರ್ಜರಿ ಪ್ರಚಾರವನ್ನ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.
2023 ರ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಚುನಾವಣಾ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದ ಮಾಜಿ ಸಿಎಂ ಎಚ್ಡಿಕೆ, ಸದ್ಯ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. ಬುಧವಾರ ಮತದಾನ ಮುಗಿದ ಬಳಿಕ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡ ನಂತರ ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಶನಿವಾರ ಮಧ್ಯಾಹ್ನ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ. ಸಮೀಕ್ಷೆಗಳಿಂದ ಬೇಸರಗೊಂಡಿರುವ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ.












Click it and Unblock the Notifications