ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದಿ ಹೇರಿಕೆ: ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14: ಹಿಂದಿ ದಿವಸ್ ಆಚರಿಸುವ ಮೂಲಕ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಹಿಂದಿಯನ್ನು ರಾಷ್ಟ್ರೀಯತೆ, ಹಿಂದುತ್ವದ ಪ್ರತಿನಿಧಿಯೆಂಬಂತೆ ಬಿಂಬಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Recommended Video

ದಂಗೆ ಏಳುವ ಮೊದಲು Hindi Diwas ಆಚರಣೆ ನಿಲ್ಬೇಕು!! | Oneindia Kannada

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.

ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಹೊಸ ಟೀ-ಶರ್ಟ್! ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಹೊಸ ಟೀ-ಶರ್ಟ್!

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಂದೆ ಓದಿ.

ಹೇರಿಕೆಯಿಂದ ಕಲಿಕೆ ಆಗದು

ಹೇರಿಕೆಯಿಂದ ಕಲಿಕೆ ಆಗದು

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿಧ್ಯ, ಸಮಗ್ರತೆಗೆ ಧಕ್ಕೆ ತರಬಾರದು ಎಂದಿದ್ದಾರೆ.

ನಾವೇಕೆ ಆಚರಿಸಬೇಕು?

ನಾವೇಕೆ ಆಚರಿಸಬೇಕು?

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರರ್ಥಕ ಹಿಂದಿ ದಿವಸ ರದ್ದಾಗಬೇಕು.

ಹಿಂದಿ ಹೇರಿಕೆ: ಸಿಡಿದೆದ್ದ ದಕ್ಷಿಣ ಭಾರತದ ನಾಯಕರುಹಿಂದಿ ಹೇರಿಕೆ: ಸಿಡಿದೆದ್ದ ದಕ್ಷಿಣ ಭಾರತದ ನಾಯಕರು

ಕನ್ನಡ ದಿನವನ್ನೂ ಆಚರಿಸಿ

ಕನ್ನಡ ದಿನವನ್ನೂ ಆಚರಿಸಿ

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.

ಬಿಜೆಪಿಗರು ಇದನ್ನು ಬದಲಿಸಲಿ

ಬಿಜೆಪಿಗರು ಇದನ್ನು ಬದಲಿಸಲಿ

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೆಂದೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.

ಎನ್‌ಇಪಿಯನ್ನು ವಿರೋಧಿಸಲಿ

ಎನ್‌ಇಪಿಯನ್ನು ವಿರೋಧಿಸಲಿ

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.

ರಾಷ್ಟ್ರೀಯತೆ ಜತೆ ಸಮೀಕರಣ

ರಾಷ್ಟ್ರೀಯತೆ ಜತೆ ಸಮೀಕರಣ

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.

ದೌರ್ಬಲ್ಯ ಎಂದು ಭಾವಿಸಬೇಡಿ

ದೌರ್ಬಲ್ಯ ಎಂದು ಭಾವಿಸಬೇಡಿ

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ. ಜೈ ಕನ್ನಡಾಂಬೆ ಜೈ ಭಾರತಾಂಬೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
Former CM HD Kumaraswamy raises voice against Hindi imposition and celebration of Hindi Diwas in non Hindi states.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X