ಆನೇಕಲ್‌ ಪಟಾಕಿ ದುರಂತದ ಮೃತರ ಕುಟುಂಬಕ್ಕೆ ಸರ್ಕಾರ ಆಸರೆಯಾಗಬೇಕು-ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್ 08: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕರು ತಮಿಳುನಾಡು ಮೂಲದವರೆಂದು ತಿಳಿದು ಬಂದಿದೆ.

ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲಿಕರಾದ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲೀಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

former-cm-hd-kumaraswamy-reaction

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಯಿಸಿದ್ದು, ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ.

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲುಕಿದೆ. ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.

former-cm-hd-kumaraswamy-reaction

ಇನ್ನು ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ನಿನ್ನೆ ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ 'ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಪಟಾಕಿ ದುರಂತಕ್ಕೆ ಕಾರಣ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಗೋಡೌನ್‍ಗೆ ಅನುಮತಿ ಇರಲಿಲ್ಲ, ಅಂಗಡಿಗಷ್ಟೇ ಅನುಮತಿ ಇತ್ತು. ಕಾರ್ಮಿಕರಿಲ್ಲದೇ ಗ್ರಾಹಕರು ಕೂಡ ಸಿಲುಕಿರುವ ಶಂಕೆ ಇದೆ' ಎಂದು ತಿಳಿಸಿದ್ದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇಂದು ಪಟಾಕಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+