India
 • search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಬಿಜೆಪಿಯ ಅಧಿಕಾರ ದಾಹ ಕಾರಣ'

|
Google Oneindia Kannada News

ಬೆಂಗಳೂರು, ಜೂನ್ 23: ಬಿಜೆಪಿಗೆ ಅಧಿಕಾರದ ದಾಹ ಹೆಚ್ಚಾಗಿದೆ, ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು. "ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ ಎಂದರೆ, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತ ಬಂದ ಸರಕಾರವೂ ಉಳಿಯುವುದು ಅನುಮಾನ" ಎನ್ನುವ ಬೇಸರವನ್ನು ವ್ಯಕ್ತ ಪಡಿಸಿದರು.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ: ತುಂಬಾ ಸಂತೋಷ ಎಂದ ಗುಬ್ಬಿ ಶ್ರೀನಿವಾಸ್ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ: ತುಂಬಾ ಸಂತೋಷ ಎಂದ ಗುಬ್ಬಿ ಶ್ರೀನಿವಾಸ್

"ಈ ಬಿಜೆಪಿ‌ ಪೂರ್ಣ ಬಹುಮತ ಪಡೆದ ಇತರೆ ಯಾವುದೇ ಪಕ್ಷದ ಸರಕಾರದ ಅವಧಿ ಮುಗಿಸುವುದಕ್ಕೂ ಬಿಡುವುದಿಲ್ಲ ಅನ್ನಿಸುತ್ತದೆ. ಮೇಲ್ನೋಟಕ್ಕೆ ಉದ್ದವ್ ಠಾಕ್ರೆ ಅವರು ಶಾಸಕರ ವಿಶ್ವಾಸ ಗಳಿಸಿಲ್ಲವೆಂದು ಹೇಳುತ್ತಿದ್ದಾರೆ. ಆದರೆ ಅದರ ಹಿಂದೆ ಇರುವುದು ಬಿಜೆಪಿಯೇ. ಇದರಲ್ಲಿ ಯಾವುದೇ ಅನುಮಾನ ಇಲ್ಲ" ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.

"ಕರ್ನಾಟಕದಲ್ಲಿ ನನಗೂ‌ ಇದರ ಅನುಭವ ಆಗಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂದು ನನ್ನ ಮೇಲೂ ಆರೋಪ ಮಾಡಿದರು. ಶಾಸಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಸುಳ್ಳು ಪ್ರಚಾರ ಮಾಡಿದರು. ನಾನು ಕಾಂಗ್ರೆಸ್ ಶಾಸಕರ ಕ್ಷೇತ್ರದ ಅಭಿವೃದ್ದಿಗೆ 19 ಸಾವಿರ ಕೋಟಿ ಕೊಟ್ಟೆ. ಆ ಪಕ್ಷದ ಶಾಸಕಾಂಗ ಪಕ್ಷದ ನಾಯಕರಿಗೆ ಆ ಮಾಹಿತಿ ಇದ್ದ ಪಟ್ಟಿಯನ್ನೇ ನೀಡಿದ್ದೆ. ಆದರೂ ಶಾಸಕರನ್ನು ಆಪರೇಶನ್ ಕಮಲ ಮಾಡಿ ಸರಕಾರವನ್ನು ತೆಗೆದರು" ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಶಾಸಕರು Yes ಎಂದರೆ 'ಮಹಾ' ವಿಕಾಸ ಅಘಾಡಿಗೆ ಶಿವಸೇನೆ ಟಾಟಾ.. ಬಾಯ್ ಬಾಯ್!ಶಾಸಕರು Yes ಎಂದರೆ 'ಮಹಾ' ವಿಕಾಸ ಅಘಾಡಿಗೆ ಶಿವಸೇನೆ ಟಾಟಾ.. ಬಾಯ್ ಬಾಯ್!

 ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ

ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ

"ಮಹಾರಾಷ್ಟ್ರದ ಬಿಜೆಪಿ ನಡವಳಿಕೆ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ. ಈ ಅನಾಚಾರವನ್ನು ಬಿಜೆಪಿ ದೇಶವ್ಯಾಪಿ ವಿಸ್ತಾರ ಮಾಡುತ್ತಿದೆ. ಸಂವಿಧಾನ ರಕ್ಷಣೆ ಅನ್ನುವುದು ಇವತ್ತು ಉಳಿದಿಲ್ಲ. ಎಷ್ಟೇ ಒಳ್ಳೆಯ ಸರಕಾರ ಮಾಡಿದರೂ ಬೆಲೆ ಇಲ್ಲದಂತೆ ಆಗಿದೆ" ಎಂದು ಬಿಜೆಪಿ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

 ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆ

ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆ

ಪಠ್ಯಪುಸ್ತಕ ಬಿಕ್ಕಟ್ಟಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, "ಪಠ್ಯಪುಸ್ತಕದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಒಂದು ಕಡೆ ಪಠ್ಯದ ವಿರುದ್ದ ಮಾತಾಡುತ್ತಿದೆ. ಈಗ ಬಿಜೆಪಿ ಸಚಿವರು ಸಿದ್ದರಾಮಯ್ಯ ಸರಕಾರ ಪಠ್ಯ ರಚನೆ ಮಾಡಿದ ವಿರುದ್ದ ಆಪಾದನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ತಪ್ಪು ಮಾಡಿದೆ ಎಂದು ಹೇಳುತ್ತಿದ್ದಾರೆ. ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆಂದು ಕುವೆಂಪು ವೇದಿಕೆ ಅವರು ಹೆಚ್.ಡಿ.ದೇವೇಗೌಡರಿಗೆ ಅಹ್ವಾನ ಕೊಟ್ಟಿದ್ದರು. ಹಾಗಾಗಿ, ದೇವೇಗೌಡರು ಹೋರಾಟಕ್ಕೆ ಹೋಗಿದ್ದರು. ಎರಡೂ ಸರಕಾರಗಳ ಅವಧಿಯಲ್ಲಿ ಪಠ್ಯಕ್ಕೆ ಏನೆಲ್ಲಾ ಅಪಚಾರ ಆಗಿದೆ ಎಂಬುದನ್ನು ನಾನು ಕೂಡ ಅಧ್ಯಯನ ಮಾಡುತ್ತಿದ್ದೇನೆ" ಎಂದು ಕುಮಾರಸ್ವಾಮಿ ಹೇಳಿದರು.

 ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಉಚ್ಚಾಟನೆ

ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಉಚ್ಚಾಟನೆ

"ಶಾಸಕರಾದ ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಉಚ್ಚಾಟನೆ ಮಾಡಿರುವುದು ಕೋರ್ ಕಮಿಟಿ ನಿರ್ಧಾರ. ಪಕ್ಷದ ವಿರುದ್ದ ಅಡ್ಡ ಮತದಾನ ಮಾಡಿದ್ದಕ್ಕೆ ಉಚ್ಚಾಟನೆ ಮಾಡಲಾಗಿದೆ. ಈ ಸಂಬಂಧ ಕೋರ್ಟ್ ಗೆ ಹೋಗುವುದು ಅಥವಾ ವಿಧಾನಸಭೆ ಸ್ಪೀಕರ್ ಗೆ ದೂರು ನೀಡುವುದರಿಂದ ಏನು ಆಗದು. ಈಗ ಇರುವ ಪಕ್ಷಾಂತರ ನಿಷೇಧ ಕಾಯ್ದೆ ಯಶಸ್ವಿಯಾಗುವುದಿಲ್ಲ" ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.

 ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಬಿಜೆಪಿಯ ಬೆಂಬಲವೇ ಕಾರಣ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಬಿಜೆಪಿಯ ಬೆಂಬಲವೇ ಕಾರಣ

"ಮೊದಲು ಈ ವ್ಯವಸ್ಥೆ ಬದಲಾವಣೆ ಆಗಬೇಕು. ನಮ್ಮ ಸರಕಾರ ಬಂದರೆ ಈ ಕಾನೂನುಗಳಿಗೆ ಬಲ ಕೊಡುವ ಕೆಲಸ ಮಾಡಲಾಗುವುದು. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಬಿಜೆಪಿಯ ಬೆಂಬಲವೇ ಕಾರಣ" ಎಂದು ಕುಮಾರಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಮುಂತಾದವರು ಹಾಜರಿದ್ದರು.

   Narendra Modiಗೆ ಎರಡು ದಶಕಗಳ ನಂತರ ಕ್ಲೀನ್ ಚಿಟ್ | India | Oneindia Kannada

   English summary
   Former CM H D Kumaraswamy Reaction On Maharasthra Political Development. Know More,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X