India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಡೀ PSI ಹಗರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 5: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಮಾತನಾಡಿದ ಕುಮಾರಸ್ವಾಮಿ, "ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು ಮೊತ್ತ ಎಷ್ಟಾಯ್ತು? 200-300 ಜನ 70-80 ಲಕ್ಷ ಕೊಟ್ಟಿದ್ದರೆ ಒಟ್ಟು ಹಣ ಎಷ್ಟಾಯ್ತು" ಎಂದು ಪ್ರಶ್ನಿಸಿದರು.

ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನದ ಹಿಂದೆ ಒಂದೇ ಕಾರಣ?ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನದ ಹಿಂದೆ ಒಂದೇ ಕಾರಣ?

"ನಾನು ಯಾವುದೇ ಕಾರಣಕ್ಕೂ ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಹಗರಣದಲ್ಲಿ ಕಿಂಗ್ ಪಿನ್ ಬೇರೆ ಇದ್ದಾರೆ, ಅವರನ್ನು ಮೊದಲು ಬಂಧಿಸಿ. ಸಣ್ಣ ಪುಟ್ಟ ಮೀನು ಹಿಡಿಯಬೇಡಿ ಅಂದಿದ್ದೆ. ನಾನು ಸರ್ಕಾರಕ್ಕೆ ಎಚ್ಚರಿಕೆ‌ ಕೊಡುತ್ತಾ ಬಂದಿದ್ದೇನೆ. ಎಲ್ಲಾ ಮಾಹಿತಿ ಪಡೆದ ನಂತರವೇ ಚರ್ಚೆ ಮಾಡೋದು" ಎಂದು ಸರಕಾರವನ್ನು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

"ಎಸಿಬಿಯ ಒಬ್ಬ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂಪಾಯಿ ಹಣ ಕೊಟ್ಟವರು ಯಾರು? ಯಾರು ತೆಗೆದುಕೊಂಡು ಹೋಗಿ ಕೊಟ್ಟವರು? ಯಾರು ತೆಗೆದುಕೊಂಡು ಹೋದರು? ಎಲ್ಲಿಂದ, ಯಾರಿಂದ ಹಣ ಪಡೆದರು ಎನ್ನುವ ಮಾಹಿತಿ ಬೇಕಾ ಮುಖ್ಯಮಂತ್ರಿಗೆ, ನಾಚಿಕೆಯಾಗಬೇಕು ಇವರಿಗೆ. ಎಸಿಬಿಗೆ ಕೋರ್ಟ್ ಛೀಮಾರಿ ಹಾಕಿದೆ. ನನ್ನ ಬಗ್ಗೆ ಹುಡುಗಾಟಿಕೆ ಮಾಡಬೇಡಿ. ನಾನು ನಿಖರ ಮಾಹಿತಿಯನ್ನೇ ಹೇಳಿದ್ದೇನೆ" ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಪಿಎಸ್ಐ ನೇಮಕಾತಿ ಅಕ್ರಮ: ಕಲಬುರಗಿ ಕೇಸಲ್ಲಿ 34 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಪಿಎಸ್ಐ ನೇಮಕಾತಿ ಅಕ್ರಮ: ಕಲಬುರಗಿ ಕೇಸಲ್ಲಿ 34 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

 ನಿನ್ನೆ ಇಬ್ಬರು ಹಿರಿಯ ಅಧಿಕಾರಿಗಳ ಬಂಧನವಾಗಿದೆ

ನಿನ್ನೆ ಇಬ್ಬರು ಹಿರಿಯ ಅಧಿಕಾರಿಗಳ ಬಂಧನವಾಗಿದೆ

"ನಿನ್ನೆ ಇಬ್ಬರು ಹಿರಿಯ ಅಧಿಕಾರಿಗಳ ಬಂಧನವಾಗಿದೆ. ಈ ಘಟನೆಗೆ ಕಾರಣ ಅನೇಕ ವರ್ಷಗಳಿಂದ ಆಗಿರುವ ಆಡಳಿತದ ಕುಸಿತ. ಆಡಳಿತ ನಡೆಸುವ ಮುಖ್ಯಸ್ಥರ ನಡವಳಿಕೆಯೇ ಇದಕ್ಕೆ ಕಾರಣ. ರಾಜ್ಯದಲ್ಲಿ ಭ್ರಷ್ಟಾಚಾರ ಸ್ವೇಚ್ಚಾಚಾರವಾಗಿ ನಡೀತಾ ಇದೆ. ಇದು ಕೇವಲ ಬಿಜೆಪಿ ಪಕ್ಷದ ಭ್ರಷ್ಟಾಚಾರ ಅಷ್ಟೆ ಅಲ್ಲ ಕಾಂಗ್ರೆಸ್ ಆಡಳಿತದಲ್ಲೂ ಇತ್ತು. ಆಗ ಕಠಿಣ ಕ್ರಮ ತೆಗದುಕೊಳ್ಳದೇ ಅಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಟ್ಟರು" ಎಂದು ಕುಮಾರಸ್ವಾಮಿ ದೂರಿದರು.

 ಹಿರಿಯ ಅಧಿಕಾರಿ ಫ್ಲಾಟ್ ನಲ್ಲಿ 5 ಕೋಟಿ ಹಣ ಸಿಕ್ಕಿತು

ಹಿರಿಯ ಅಧಿಕಾರಿ ಫ್ಲಾಟ್ ನಲ್ಲಿ 5 ಕೋಟಿ ಹಣ ಸಿಕ್ಕಿತು

"ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಹಿರಿಯ ಅಧಿಕಾರಿ ಫ್ಲಾಟ್ ನಲ್ಲಿ 5 ಕೋಟಿ ಹಣ ಸಿಕ್ಕಿತು. ಯಶವಂತಪುರ ಫ್ಲಾಟ್ ನಲ್ಲಿ ಆ ಹಣವನ್ನು ಸೀಜ್ ಮಾಡಿದರು. ಆ ಅಧಿಕಾರಿಗೆ ಮತ್ತೆ ರಕ್ಷಣೆ ಕೊಟ್ಟು ಉನ್ನತ ಹುದ್ದೆ ಕೊಟ್ಟರು. ಇಂಥ ಹಿನ್ನೆಲೆ ಕಾಂಗ್ರೆಸ್ ನಿಂದ ಪ್ರಾರಂಭ ಆಗಿ ಬಿಜೆಪಿ ಅದನ್ನು ಮುಂದುವರೆಸಿದೆ. ಇದರಿಂದಲೇ ಯಾವುದೇ ಅಧಿಕಾರಿಗಳಿಗೆ ಭಯ ಭೀತಿ ಇಲ್ಲ" ಎಂದು ಕುಮಾರಸ್ವಾಮಿ ದೂರಿದರು.

 ಗುರೂಜಿ ಕೊಲೆ: ಪೊಲೀಸ್ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡುತ್ತಾರೆ

ಗುರೂಜಿ ಕೊಲೆ: ಪೊಲೀಸ್ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡುತ್ತಾರೆ

ಹುಬ್ಬಳ್ಳಿಯಲ್ಲಿ ನಡೆದ ಚಂದ್ರಶೇಖರ ಗುರೂಜಿ ಕೊಲೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, "ಯಾರಿಗೂ ಇವತ್ತು ಭಯ ಭಕ್ತಿ ಇಲ್ಲ ಹಾಗೂ ಯಾರಿಗೂ ರಕ್ಷಣೆಯೂ ಇಲ್ಲ. ಬಿಜೆಪಿ ಆಡಳಿತದಲ್ಲಿ ಏನೆಲ್ಲ ಆಗುತ್ತಿದೆ ಎನ್ನುವುದಕ್ಕೆ ಇದು ಜ್ವಲಂತ ಉದಾಹರಣೆ" ಎಂದರು.

 ಪೊಲೀಸರ ಪೋಸ್ಟಿಂಗ್ ನಲ್ಲಿ ರೇಟ್ ಫಿಕ್ಸ್

ಪೊಲೀಸರ ಪೋಸ್ಟಿಂಗ್ ನಲ್ಲಿ ರೇಟ್ ಫಿಕ್ಸ್

ನಾವೇ ಇಲ್ಲಿ ನಿಂತಿದ್ದೇವೆ, ನಾಳೆ ಏನಾಗುತ್ತೋ ಗೊತ್ತಿಲ್ಲ. ಆ ರೀತಿ ಘಟನೆ ಆಗಲು ರಾಜ್ಯದ ಆಡಳಿತ ಕುಸಿತವೇ ಕಾರಣ. ಒಂದು ಹೋಟೆಲ್ ರಿಸಪ್ಷನ್ ನಲ್ಲಿ ಬರ್ಬರ ಹತ್ಯೆ ಆಗುತ್ತೆ ಅಂದರೆ ಏನು ಅರ್ಥ? ಇದಕ್ಕೆ ಕಾರಣ ಭ್ರಷ್ಟಾಚಾರ. ಪೊಲೀಸರ ಪೋಸ್ಟಿಂಗ್ ನಲ್ಲಿ ರೇಟ್ ಫಿಕ್ಸ್ ಮಾಡುವುದರಿಂದ. ಒಂದೊಂದು‌ ಪೊಲೀಸ್ ಠಾಣೆಗೆ ವರ್ಗಾವಣೆಗೆ ಹಣ ಫಿಕ್ಸ್ ಮಾಡುತ್ತಿದ್ದಾರೆ. ಹೀಗೆಲ್ಲ ಆಗಲು ಅದೇ ಕಾರಣ" ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಎಚ್.ಡಿ. ಕುಮಾರಸ್ವಾಮಿ
Know all about
ಎಚ್.ಡಿ. ಕುಮಾರಸ್ವಾಮಿ
English summary
Former CM H D Kumaraswamy Reaction On PSI Scam And Guruji Death. Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X