ರಾಜ್ಯದಲ್ಲಿ ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಎಚ್‌ಡಿಕೆ ಕಿಡಿ
ಬೆಂಗಳೂರು ಮಾರ್ಚ್ 23: ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಡುವಂತ ಕೆಲಸ ಮಾಡುತ್ತಿದ್ದಾರೆ. ಇದು ಪ್ರಾರಂಭದ ಹಂತ. ಬಹುಶಃ ಇನ್ನೂ ಏಳು ಎಂಟು ತಿಂಗಳಲ್ಲಿ ಏನಾನು ಕಾದಿದಿಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿಯ ಕೊಳ್ಳಿ ಇಡುವಂತ ಕೆಲಸ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಬಿಜೆಪಿ ಮತ್ತು ಪಕ್ಷದ ಕೆಲವು ಆರ್ಗನೈಜೇಷನ್‌ಗಳು ಹಲವಾರು ರೀತಿಯ ಭಾವನಾತ್ಮಕ ವಿಚಾರಗಳನ್ನು ಸಾರ್ವಜನಿಕವಾಗಿ ತೆಗೆದುಕೊಳ್ಳುವ ಮುಖಾಂತರ ರಾಜ್ಯದಲ್ಲಿ ಸಾಮರಸ್ಯದ ಕೊರತೆಯನ್ನು ಕಾಣುವ ವಾತಾವರಣವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ. ಈ ಬಗ್ಗೆ ನಾನು ಮೂರು ತಿಂಗಳ ಹಿಂದೆ ಸುಳಿವು ನೀಡಿದ್ದೆ. ಈಗ ಅದು ಪ್ರಾರಂಭವಾಗಿದೆ. ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾತನಾಡಲು ಇವರ ಬಳಿ ಯಾವುದೇ ಸರಕು ಇಲ್ಲ. ಉತ್ತರ ಭಾರತದಲ್ಲಿ ಇದ್ದಂತ ಭಾವನಾತ್ಮಕ ಚುನಾವಣಾ ವ್ಯವಸ್ಥೆಯನ್ನು ಪರಿಚಯಿಸಲು ಕರ್ನಾಟಕದಲ್ಲೂ ವೇದಿಕೆ ಮಾಡಿಕೊಂಡಿದ್ದಾರೆ" ಎಂದು ಕಿಡಿ ಕಾರಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿಯ ಕೊಳ್ಳಿ ಇಡುವಂತ ಕೆಲಸ ಮಾಡುತ್ತಿದ್ದಾರೆ. ಇದು ಪ್ರಾರಂಭದ ಹಂತ. ಬಹುಶ: ಇನ್ನೂ ಏಳು ಎಂಟು ತಿಂಗಳಲ್ಲಿ ಏನಾನು ಕಾದಿದಿಯೋ ನನಗೆ ಗೊತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಬರೆದಿದ್ದಾರೆ. ಅವರು ಬರೆದ ಗೀತೆಯನ್ನು ನಾವು ನಾಡಗೀತೆಯಾಗಿ ಅಳವಡಿಸಿಕೊಂಡಿದ್ದೇವೆ. ಇಂಥ ಸರ್ವ ಜನಾಂಗದ ತೋಟಕ್ಕೆ ಕೊಳ್ಳಿ ಇಡುವ ಕೆಲಸ ಆರಂಭವಾಗಿದೆ. ಇವರು ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಕೋಮು ಸಂಘರ್ಷ ಉಂಟು ಮಾಡಲು ಇದೆಲ್ಲ ಮಾಡುತ್ತಿದ್ದಾರೆ. ಕರಾವಳಿಯ ಸಂಘರ್ಷವನ್ನು ಇಡೀ ರಾಜ್ಯಕ್ಕೆ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಾರಂಭದ ಹಂತ. ಬಹುಶ: ಇನ್ನೂ ಏಳು ಎಂಟು ತಿಂಗಳಲ್ಲಿ ಏನಾನು ಕಾದಿದಿಯೋ ನನಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಸಂಪದ್ಭರಿತರಾಗಿದ್ದಾರೆ. ಹೀಗಾಗಿ ಜನ ಬೆಲೆ ಏರಿಕೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಬಹುಶಃ ಈ ಕಾರಣಕ್ಕೆ ಅವರು ಪ್ರತಿಭಟನೆ ಮಾಡುತ್ತಿಲ್ಲ. ಈಗಲಾದರೂ ಎಲ್ಲರೂ ಎಚ್ಚೆತ್ತು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಿದೆ ಎಂದು ಕುಮಾರಸ್ವಾಮಿ ಅವರು ಉತ್ತರ ನೀಡಿದರು. ಜನರು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೇನು ದುರಂತ ಕಾದಿದೆಯೊ ಗೊತ್ತಿಲ್ಲ. ದುರಂತ ಎಂದರೆ ಬೆಲೆ ಏರಿಕೆ ವಿಚಾರ ಜನರಿಗೆ ಬೇಡವಾಗಿದೆ. ನಮ್ಮದು ಕೀರಲು ದನಿಯಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.












Click it and Unblock the Notifications