ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಸಲಹೆ ನೀಡಿದ್ದ ಲಾಕ್‌ಡೌನ್ ಹೀಗಲ್ಲವಂತೆ: ಮತ್ತೆ ಹೇಗೆ?

|
Google Oneindia Kannada News

ಬೆಂಗಳೂರು, ಮೇ 10: ಮೇ ಹತ್ತರಿಂದ ಹದಿನಾಲ್ಕು ದಿನಗಳ ಲಾಕ್‌ಡೌನ್ ಆರಂಭವಾಗಿದೆ. ಬೆಳಗ್ಗೆ ಆರರಿಂದ ಹತ್ತರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದ್ದಿದ್ದರಿಂದ, ಜನರ ಓಡಾಟ ಸಾಮಾನ್ಯದಂತಿತ್ತು.

ಆದರೆ, ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಟ್ರಾಫಿಕ್ ಜಾಮ್ ಇರಲಿಲ್ಲ. ಆದಾಗ್ಯೂ, ಮನೆಯಿಂದ ಹೊರಬಂದವರನ್ನು ತಡೆದ ಪೊಲೀಸರು, ಅವರಿಂದ ಇನ್ನು ಮುಂದೆ ಕೋವಿಡ್ ನಿಯಮ ಉಲ್ಲಂಘಿಸುವುದಿಲ್ಲ ಎಂದು (ಯಶವಂತಪುರದಲ್ಲಿ) ಪ್ರಮಾಣ ಬರೆಸಿಕೊಂಡು ಕಳುಹಿಸಿದ ವಿದ್ಯಮಾನವೂ ನಡಿದಿದೆ.

ಕೊರೊನಾ ನಿಭಾಯಿಸಲು ಸರಕಾರಕ್ಕೆ ಎಚ್ಡಿಕೆ ಕೊಟ್ಟ 10 ಸಲಹೆಗಳುಕೊರೊನಾ ನಿಭಾಯಿಸಲು ಸರಕಾರಕ್ಕೆ ಎಚ್ಡಿಕೆ ಕೊಟ್ಟ 10 ಸಲಹೆಗಳು

ಲಾಕ್‌ಡೌನ್ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ. "ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ".

"ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 ಕನ್ನಡಿಗರನ್ನು ಕೇಂದ್ರ ಸರಕಾರ 'ಹಣೆಬರಹ'ಕ್ಕೆ ಬಿಟ್ಟಿದೆ: ಎಚ್ಡಿಕೆ ಕನ್ನಡಿಗರನ್ನು ಕೇಂದ್ರ ಸರಕಾರ 'ಹಣೆಬರಹ'ಕ್ಕೆ ಬಿಟ್ಟಿದೆ: ಎಚ್ಡಿಕೆ

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ

ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ.

 ಕೇಂದ್ರವೂ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ

ಕೇಂದ್ರವೂ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ

"ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ" ಎಚ್ಡಿಕೆ ಟ್ವೀಟ್.

 ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ

ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ

"ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ"ಎಂದು ಕುಮಾರಸ್ವಾಮಿಯವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

 ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ

ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ

"ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು" ಕುಮಾರಸ್ವಾಮಿ.

Recommended Video

Oxygen ಗಾಗಿ ಮೋದಿಯನ್ನು ಬೇಡಿಕೊಂಡಿದ್ದ ನಟ ರಾಹುಲ್ ವೊಹ್ರಾ ಕೊರೊನಾದಿಂದ ಸಾವು | Oneindia Kannada
 ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಡಿ

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಡಿ

"ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

English summary
Former CM H D Kumaraswamy Suggestions to CM Yediyurappa on Karnataka Lockdown
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X