ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್-19 ನಿಯಂತ್ರಿಸಲು ಎಚ್‌ಡಿಕೆ ಪರಿಣಾಮಕಾರಿ ಸಲಹೆಗಳು

|
Google Oneindia Kannada News

ಬೆಂಗಳೂರು, ಜು. 13: ಸರ್ಕಾರದ ಕ್ರಮಗಳ ಹೊರತಾಗಿಯೂ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗದಂತೆ ಹರಡುತ್ತಿದೆ. ಬೆಂಗಳೂರಿನಲ್ಲಂತೂ ಕೋವಿಡ್-19 ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ನಾಳೆಯಿಂದ ಒಂದು ವಾರ ಬೆಂಗಳೂರಿನಲ್ಲಿ ಲಾಕ್‌ಡೌನ್ ಜಾರಿಗೆ ಆದೇಶ ಮಾಡಿದೆ. ರಾಜ್ಯದಲ್ಲಿಯೂ ಸೋಂಕು ಅತಿಯಾಗಿರುವ ಕಡೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗಿದೆ.

Recommended Video

Rashid Khan : ಅಫ್ಘಾನಿಸ್ತಾನ ವಿಶ್ವಕಪ್ ಗೆದ್ದ ನಂತರವೇ ಮದುವೆಯಾಗುತ್ತೇನೆ | Oneindia Kannada

ಆದರೆ ಕೊರೊನಾ ವೈರಸ್‌ ಸರ್ಕಾರದ ಈ ಕ್ರಮಗಳಿಂದ ಮಾತ್ರ ನಿಯಂತ್ರಣಕ್ಕೆ ಬರುವುದು ಅಸಾಧ್ಯ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಸರ್ಕಾರ ದಿನಕ್ಕೊಂದು ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದರಿಂದ ಕೊರೊನಾ ವೈರಸ್ ಹರಡದಂತೆ ತಡೆಯುವಲ್ಲಿ ಎಡವುತ್ತಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಪರಿಣಾಮಕಾಯಾಗಿ ವೈರಸ್ ನಿಯಂತ್ರಿಸಲು ಹಲವು ಸಲಹೆಗಳನ್ನು ಕೊಟ್ಟಿದ್ದಾರೆ.

ಔಷಧಿಗಳ ಪಟ್ಟಿ

ಔಷಧಿಗಳ ಪಟ್ಟಿ

ರಾಜ್ಯದಲ್ಲಿ ಕೊರೊನಾ ವೈರಸ್ ತಡೆಯಲು ಅಗತ್ಯವಾಗಿ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ (supplements) ಪಟ್ಟಿ ಒದಗಿಸ ಬೇಕು ಎಂದು ಕುಮಾರಸ್ವಾಮಿ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು ಲಾಕ್‌ಡೌನ್‌: ಸರ್ಕಾರದ ಮುಂದೆ ಮತ್ತೊಂದು ಬೇಡಿಕೆಯಿಟ್ಟ ದೇವೇಗೌಡಬೆಂಗಳೂರು ಲಾಕ್‌ಡೌನ್‌: ಸರ್ಕಾರದ ಮುಂದೆ ಮತ್ತೊಂದು ಬೇಡಿಕೆಯಿಟ್ಟ ದೇವೇಗೌಡ

ಈ ಔಷಧಿಗಳನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ ಎಂದು ಮಾಜಿ ಸಿಎಂ ಎಚ್‌ಡಿಕೆ ಹೇಳಿದ್ದಾರೆ.

ನಿರೋಧಕ ಶಕ್ತಿ ಕಿಟ್

ನಿರೋಧಕ ಶಕ್ತಿ ಕಿಟ್

ಕೊರೊನಾ ವೈರಸ್ ಅಂಕೆಗೆ ಸಿಗದಂತೆ ಹರಡುತ್ತಿದೆ. ವ್ಯಾಪಕ‌ವಾಗಿ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster)ಗಳನ್ನು ಪ್ರತಿ ಮನೆಗೂ ಸರ್ಕಾರ ಹಂಚಿಕೆ ಮಾಡಬೇಕು ಎಂದು ಎಚ್‌ಡಿಕೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ ಪ್ರತಿ ಮನೆಗೂ ಸ್ಯಾನಿಟೈಸರ್ ಒದಗಿಸಲಿ ಎಂದು ಟ್ವೀಟ್ ಮೂಲಕ ಸಲಹೆ ಕೊಟ್ಟಿದ್ದಾರೆ.

ಉಚಿತವಾಗಿ ಹಂಚಿಕೆ

ಉಚಿತವಾಗಿ ಹಂಚಿಕೆ

ಎಲ್ಲರಿಗೂ ಉಚಿತವಾಗಿ ಆರೋಗ್ಯ ಕಿಟ್ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆರೋಗ್ಯ ಕಿಟ್ ನೀಡಲು ಸರ್ಕಾರ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕದಲ್ಲಿ ಕೋವಿಡ್-19 ನಿಯಂತ್ರಣ ಮಾಡಲು ಸಾಧ್ಯ ಎಂದು ಎಚ್‌ಡಿಕೆ ಹೇಳಿದ್ದಾರೆ.

ಎಡವುತ್ತಿದೆ ಸರ್ಕಾರ

ಎಡವುತ್ತಿದೆ ಸರ್ಕಾರ

ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಎಚ್‌ಡಿಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೂರದೃಷ್ಟಿಯಿಲ್ಲದೆ ದಿನಕ್ಕೊಂದು ಮಾರ್ಗಸೂಚಿ ಹೊರಡಿಸುತ್ತಿರುವುದರಿಂದ ಸೋಂಕಿಗೆ ಕಡಿವಾಣ ಹಾಕಲು ಆಗುತ್ತಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಬೇಕು. ತಕ್ಷಣ ಕಾರ್ಯೋನ್ಮುಖರಾಗುವ ಮೂಲಕ ಜನರ ಸಂಕಷ್ಟವನ್ನು ದೂರ ಮಾಡಬೇಕು ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

English summary
Former CM HD Kumaraswamy tweeted that coronavirus cannot be controlled by the government alone. He alleged that the state government was changing decisions day by day. HDK have also given suggestions to effectively control the virus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X