• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಜುಲೈ 11: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತು ಅವರೇ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

"ಸಣ್ಣ ಪ್ರಮಾಣದ ಜ್ವರ, ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್‌ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ," ಎಂದು ಕುಮಾರಸ್ವಾಮಿ ತಮ್ಮ ಟ್ವಿಟ್ಟರ್ ಮೂಲಕ ಮಾಹಿತಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಕಡಿಮೆ ಆಯಿತು ಎನ್ನುವಷ್ಟರಲ್ಲೇ ಮತ್ತೆ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 673 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಇದೇ ಅವಧಿಯಲ್ಲಿ 852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಅವಧಿಯಲ್ಲಿ ಸೋಂಕಿನಿಂದ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ತನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಪರೀಕ್ಷಿಸಿಕೊಳ್ಳಿ: "ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ," ಎಂದು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

Recommended Video

   Dinesh Karthik ಇನ್ಮುಂದೆ ಬೆಂಚ್ ಕಾಯೋದು ಕನ್ಫರ್ಮ್ | *Cricket | OneIndia Kannada
   English summary
   Former Chief Minister H. D. Kumaraswamy tested corona virus positive; Tweeted on Health Condition.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X