ಎಚ್. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ
ಬೆಂಗಳೂರು, ಏಪ್ರಿಲ್ 17; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ ಮೂಲಕ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
Recommended Video
ಶಣಿವಾರ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, "ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ" ಎಂದು ಹೇಳಿದ್ದಾರೆ.

"ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಟ್ವೀಟ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
I have tested positive for COVID-19. I request everyone who came in close contact with me over the last few days to isolate themselves and get tested.
— H D Kumaraswamy (@hd_kumaraswamy) April 17, 2021
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
ಎಚ್. ಡಿ. ಕುಮಾರಸ್ವಾಮಿ ಅವರು ಕೆಲವು ದಿನಗಳ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರವನ್ನು ಕೈಗೊಂಡಿದ್ದರು. ಇಂದು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.
ಎಚ್. ಡಿ. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ. ಪಿ. ನಗರದ ನಿವಾಸದಲ್ಲಿಯೇ ಇದ್ದಾರೆ. ಹೋಂ ಐಸೋಲೇಷನ್‌ನಲ್ಲಿದ್ದು, ಅವರು ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.












Click it and Unblock the Notifications