ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ

|
Google Oneindia Kannada News

ಬೆಂಗಳೂರು, ಏಪ್ರಿಲ್ 17; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ ಮೂಲಕ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

Recommended Video

HD Kumar Swamy Tests Positive, ಮಾಜಿ ಮುಖ್ಯಮಂತ್ರಿ ಗೆ ಕೊರೋನ ಸೋಂಕು! | Oneindia Kannada

ಶಣಿವಾರ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, "ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ" ಎಂದು ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಜನರ ಆಶೀರ್ವಾದದಿಂದ ಸಿಎಂ ಆಗಿದ್ದು ಯಾವಾಗ? ಎಚ್. ಡಿ. ಕುಮಾರಸ್ವಾಮಿ ಜನರ ಆಶೀರ್ವಾದದಿಂದ ಸಿಎಂ ಆಗಿದ್ದು ಯಾವಾಗ?

Former CM HD Kumaraswamy Tested Positive For COVID 19

"ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಟ್ವೀಟ್ ಮೂಲಕ ಎಚ್. ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಅವರು ಕೆಲವು ದಿನಗಳ ಹಿಂದೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರವನ್ನು ಕೈಗೊಂಡಿದ್ದರು. ಇಂದು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲುಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು

ಎಚ್. ಡಿ. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ. ಪಿ. ನಗರದ ನಿವಾಸದಲ್ಲಿಯೇ ಇದ್ದಾರೆ. ಹೋಂ ಐಸೋಲೇಷನ್‌ನಲ್ಲಿದ್ದು, ಅವರು ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

English summary
In a tweet on April 17, 2021 former CM H. D. Kumaraswamy said that he tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X