ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಊರೇ ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿ ಏನು ಪ್ರಯೋಜನ?: ಎಚ್‌ಡಿಕೆ ಟೀಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಆದರೂ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬಾರದಿರುವುದು ಸರ್ಕಾರವನ್ನು ಚಿಂತೆಗೀಡು ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರವನ್ನು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರೊನಾ ಅಂತ್ಯ ಕಾಲ ತುಂಬಾ ದೂರವಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆಕೊರೊನಾ ಅಂತ್ಯ ಕಾಲ ತುಂಬಾ ದೂರವಿದೆ ಎಂದ ವಿಶ್ವ ಆರೋಗ್ಯ ಸಂಸ್ಥೆ

ಎಚ್‌ಡಿಕೆ ಹೇಳಿದ್ದೇನು?

"ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆಗಳನ್ನು ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಂದು ಪ್ರಶ್ನಿಸಿದ್ದಾರೆ.

Former CM HD Kumaraswamy Tweet About All Party Meeting Due To Increases Covid-19 Cases

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೊರೊನಾ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್‌ ಏರಿಕೆಯಾಗಿದ್ದರೆ, ಇತ್ತ ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್ ಲಸಿಕೆಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.

ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ ಎಂದು ಮಾಜಿ ಸಿಎಂ ಎಚ್‌ಡಿಕೆ ಟೀಕಿಸಿದ್ದಾರೆ.

ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.

Recommended Video

ಲಾಕ್‌ಡೌನ್‌ ಬಗ್ಗೆ ಚರ್ಚೆ ಇಲ್ಲ, ಮತ್ತಷ್ಟು ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ ವಿಸ್ತರಣೆಗೆ ಚಿಂತನೆ- ಸಿಎಂ ಬಿಎಸ್‌ವೈ | Oneindia Kannada

English summary
Former CM HD Kumaraswamy has criticized the state and central government for failing to control coronavirus cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X