ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ

|
Google Oneindia Kannada News

ಬೆಂಗಳೂರು, ಮೇ 14: ಕೊರೊನಾ ನಿರ್ವಹಣೆಯ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸರಕಾರದ ವಿರುದ್ದ ಕಿಡಿಕಾರಿದ್ದಾರೆ. ಹೊಣೆಗೇಡಿತನ ಪ್ರದರ್ಶಿಸಬೇಡಿ ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ, "ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ, ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ
-ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ.

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು" ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

ಎಚ್ಡಿಕೆ ಕೊಟ್ಟಿದ್ದು ಮಾಹಿತಿ ತಪ್ಪು ಎಂದು ಸಾರಲು, ಸಿಎಂ ಪ್ರೆಸ್ ಕಾನ್ಫರೆನ್ಸ್ ಕರೆದರೇ?ಎಚ್ಡಿಕೆ ಕೊಟ್ಟಿದ್ದು ಮಾಹಿತಿ ತಪ್ಪು ಎಂದು ಸಾರಲು, ಸಿಎಂ ಪ್ರೆಸ್ ಕಾನ್ಫರೆನ್ಸ್ ಕರೆದರೇ?

"ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,' ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? 'ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,' ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು" ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

 ಮೋದಿ ಸರಕಾರದ ವಿರುದ್ದ ಜನ ದಂಗೆ ಎದ್ದಾರು: ಗಂಭೀರ ಎಚ್ಚರಿಕೆ ಮೋದಿ ಸರಕಾರದ ವಿರುದ್ದ ಜನ ದಂಗೆ ಎದ್ದಾರು: ಗಂಭೀರ ಎಚ್ಚರಿಕೆ

"ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ"ಎನ್ನುವ ಅಭಿಪ್ರಾಯವನ್ನು ಎಚ್ಡಿಕೆ ವ್ಯಕ್ತ ಪಡಿಸಿದ್ದಾರೆ.

 ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ

"ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು" - ಕುಮಾರಸ್ವಾಮಿ ಟ್ವೀಟ್.

 ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ.

ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ.

 ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ

ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ

ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ.

English summary
Former CM H D Kumaraswamy Tweet On yediyurappa Government On Handling Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X