ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯನವರ ಕುತಂತ್ರ ನೆನಪಿಸುವ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಫೆ 12: ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ತೀರ್ಮಾನಕ್ಕೆ ಬಂದಿರುವುದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಇದಕ್ಕೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ನಾವು ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಅದನ್ನು ಉಲ್ಲೇಖಿಸಿದ ಮಾಜಿ ಪ್ರಧಾನಿ ದೇವೇಗೌಡರು, "ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಸೂಕ್ತ ನಿರ್ಧಾರ" ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದರು. ಇದನ್ನು ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಅದಕ್ಕೆ ಎಚ್ಡಿಕೆ ಟ್ವೀಟ್ ಮೂಲಕ ಕೊಟ್ಟ ತಿರುಗೇಟು ಹೀಗಿದೆ:

ಉಪ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ: ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ದೇವೇಗೌಡರ ಪ್ರತಿಕ್ರಿಯೆ!ಉಪ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ: ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ದೇವೇಗೌಡರ ಪ್ರತಿಕ್ರಿಯೆ!

"ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ"

"ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಸಿಗೆ ಅಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?"

ಸದನದಲ್ಲಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಿಎಂ ಯಡಿಯೂರಪ್ಪ ಸದನದಲ್ಲಿ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಿಎಂ ಯಡಿಯೂರಪ್ಪ

ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು

ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು

ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್ಸಿಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್ ನವರಾಗಿದ್ದರು.

ಸಿದ್ದರಾಮಯ್ಯ ಉಡಾಫೆ ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ

ಸಿದ್ದರಾಮಯ್ಯ ಉಡಾಫೆ ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ

ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ.

ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣ

ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣ

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಸಿಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ.

Recommended Video

'ಟಗರು' ವಿರುದ್ಧ 'ಹಳ್ಳಿಹಕ್ಕಿ' ಗುಟುರು..! | Oneindia Kannada
ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

ಜೆಡಿಎಸ್ ನಲ್ಲಿ ಇದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ.
ಜೆಡಿಎಸ್ಸಿಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಸಿಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ.

English summary
Former CM HD Kumaraswamy Warning To Opposition Leader Siddaramaiah,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X