Jagadish Shettar: ಬಿಜೆಪಿ ವರಿಷ್ಠರಿಗೆ ತಲೆನೋವು ತಂದಿಟ್ಟ ಶೆಟ್ಟರ್ ಡೆಡ್ ಲೈನ್
ಹುಬ್ಬಳ್ಳಿ ಏಪ್ರಿಲ್ 14: ಡಬಲ್ ಇಂಜಿನ್ ಸರ್ಕಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ನಾಳೆ 11ಗಂಟೆಯವರೆಗೆ ಕಮಲ ನಾಯಕರಿಗೆ ಸಮಯ ನೀಡಿದ ಶೆಟ್ಟರ್ ಅವರು ಒಂದು ವೇಳೆ ಅಂದುಕೊಂಡಂತೆ ಆಗದೇ ಇದ್ದಲ್ಲಿ ನಾನು ಬೇರೆ ರೀತಿ ಯೋಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 'ನಾನು ಪಾಸಿಟಿವ್ ಆಗಿ ಯೋಚನೆ ಮಾಡ್ತೀನಿ. ಇಗಲೂ ಆಶಾಭಾವ ಹೊಂದಿದ್ದೇನೆ. ಇವತ್ತಿಗೆ ಎರಡು ದಿನ ಆಯ್ತು. ನಾಳೆ ಘೋಷಣೆ ಆಗದೆ ಹೋದ್ರೆ ನಾನು ಯೋಚನೆ ಮಾಡ್ತೀನಿ. ಅಭಿಮಾನಿಗಳ ಸಭೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇನೆ' ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

'ನಾಳೆ ಅಭಿಮಾನಿಗಳು ಬರ್ತಾರೆ, ಸಭೆ ಮಾಡ್ತೀನಿ. ವರಿಷ್ಠರನ್ನು ಭೇಟಿ ಮಾಡಿದ ಮೇಲೆ ಪಾಸಿಟಿವ್ ರೆಸ್ಪಾನ್ಸ್ ಮಾಡಿದ್ದಾರೆ. ನಾಳೆ 11 ವರೆಗೂ ನೋಡ್ತೀನಿ. ನಂತರ ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಬೇರೆ ಜಿಲ್ಲೆಯಿಂದಲೂ ಜನ ಬರುತ್ತಿದಾರೆ. ಎಲ್ಲರಿಗೂ ಜಗದೀಶ್ ಶೆಟ್ಟರ್ ಗೆ ಅಪಮಾನ ಆಗಿದೆ ಅಂತೀದಾರೆ' ಎಂದರು.
ನನಗೆ ಅಲ್ಲ ಇದು ಮತದಾರರಿಗೂ ಮಾಡಿದ ಅಪಮಾನ.ಇದು ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತ ಅಲ್ಲ. ರಾಜ್ಯದ ಎಲ್ಲ ಕಡೆ ಇಂದ ಕರೆ ಮಾಡ್ತೀದಾರೆ. ನಾನು ಕಾಡಿ ಬೇಡಿ ಟಿಕೆಟ್ ಕೇಳಲ್ಲ,ವರಿಷ್ಠರು ಫೋನ್ ಮಾಡಿದ್ದಕ್ಕೆ ಹೋಗಿದ್ದೆ. ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿರೋದಕ್ಕೆ ಹೋಗಿದ್ದು, ನಾಳೆವರೆಗೂ ವೇಟ್ ಮಾಡ್ತೀನಿ. ಪಾಲಿಕೆ ಸದಸ್ಯರು ಬೇಜರಾಗಿ ರಾಜೀನಾಮೆ ಕೊಟ್ಟಿದ್ದಾರೆ. ಅವರಿಗೆ ಅಭಿನಂದನೆ ಎಂದು ಅವರು ಹೇಳಿದರು.

'ಜೋಶಿ ಅವರು ರಾಷ್ಟ್ರೀಯ ಅಧ್ಯಕ್ಷರ ಮುಂದೆ ಹೇಳಿದ್ದಾರೆ. ಇಲ್ಲ ಅಂತಲ್ಲ, ಆದ್ರೆ ರಿಸಲ್ಟ್ ಏನು' ಎಂದ ಶೆಟ್ಟರ್ ಪರೋಕ್ಷವಾಗಿ ಕೇಂದ್ರ ಸಚಿವರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡಲ್ಲ. ನಾನೇ ಸ್ಪರ್ಧೆ ಮಾಡ್ತೀನಿ ಎಂದ ಅವರು, ಕಾಂಗ್ರೆಸ್ ಆಗಲಿ ಬೇರೆ ಯಾರೇ ಆಗಲಿ ನಮ್ಮ ಜೊತೆ ಸಂಪರ್ಕ ಮಾಡಿಲ್ಲ. ನಮ್ಮ ಕುಟುಂಬದವರೊಂದಿಗೆ ಸ್ಪರ್ಧೆ ಮಾಡೋದಿಲ್ಲ ಎಂದು ಶೆಟ್ಟರ್ ಹೇಳಿದರು.
ಹೈಕಮಾಂಡ್ ವಿರುದ್ಧ ಶೆಟ್ಟರ್ ಅಸಮಧಾನ
ಬಿಜೆಪಿ ಹೈಕಮಾಂಡ್ ವಿರುದ್ಧ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. "ನನಗೆ ವರಿಷ್ಠರಿಂದ ಪೋನ್ ಬಂದಿದ್ದು ಸತ್ಯ. ನೀವು ಹಿರಿಯ ನಾಯಕ ಆಗಿದ್ದೀರಿ, ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ ಹೇಳಿದ್ರು" ಅಂತ ಸ್ಪಷ್ಟಪಡಿಸಿದ್ದಾರೆ. ಇನ್ನು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಅಂತ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಕಳೆದ 30 ವರ್ಷಗಳಿಂದ ನಾನೂ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೇಳಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸ ನಾನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲ್ಲಿಕ್ಕೆ ಕಾರಣ ಏನು? ಬಿಜೆಪಿ ಆಂತರಿಕ ಸರ್ವೆಯಲ್ಲಿ ಪಾಸಿಟಿವ್ ಇದೆ, ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ಅದಕ್ಕೆ ನನಗೆ ಈ ಶಿಕ್ಷೆನಾ ಅಂತ ಪ್ರಶ್ನಿಸಿದ್ದಾರೆ. ಹೈಕಮಾಂಡ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರ್ ಆಗಿದೆ ಅಂತ ಹೇಳಿದ್ದಾರೆ.
ನಾನು ಸ್ಪರ್ಧೆ ಮಾಡುತ್ತೇನೆ, ನನಗೆ ಟಿಕೆಟ್ ತಪ್ಪಿಸಲಿಕ್ಕೆ ಮೈನಸ್ ಪಾಯಿಂಟ್ ಹೇಳಿ ಅಂತ ಪ್ರಶ್ನಿಸಿದ್ದಾರೆ. ಇನ್ನೂ ಅಭ್ಯರ್ಥಿಗಳ ಘೋಷಣೆ ಆಗಿಲ್ಲ, ನಾನೇ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೀನಿ. ನಾನು ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ. ನನಗೆ ಸಮಯ ಬರುತ್ತದೆ, ಅವಾಗ ನಾನೂ ಎಲ್ಲಾ ಮಾತನಾಡುತ್ತೇನೆ ಅಂತ ಹೇಳಿದ್ರು. ಹೀಗಾಗಿ ಬಿಜೆಪಿಯಲ್ಲಿ ಬಂಡಾಯದ ಪರ್ವ ಹೆಚ್ಚಾಗಿದ್ದು ಮುಂದೇನಾಗುತ್ತದೆ ಎಂದು ಕಾದು ನೋಡಬೇಕಿದೆ.
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications