• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಮುವಾದದ ಕನ್ನಡಕ ಕಳಚಿಟ್ಟು ಟಿಪ್ಪುವನ್ನು ನೋಡಿ: ಬಿಜೆಪಿಗೆ ಸಿದ್ದರಾಮಯ್ಯ ಸಲಹೆ

|
   Tipu Jayanti 2018 : ಟಿಪ್ಪು ಸುಲ್ತಾನ್ ನನ್ನ ಗೌರವಿಸುವಂತೆ ಬಿಜೆಪಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ

   ಬೆಂಗಳೂರು, ನವೆಂಬರ್ 10: ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಮರ್ಥಿಸಿಕೊಂಡಿದ್ದಾರೆ.

   ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಟಿಪ್ಪು ಜಯಂತಿ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸರಣಿ ಟ್ವೀಟ್‌ಗಳ ಮೂಲಕ ವಾದಿಸಿದ್ದಾರೆ.

   ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್

   ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ದೇಶ ಪ್ರೇಮಿ ಮೈಸೂರು ಹುಲಿ ಟಿಪ್ಪು ಸುಲ್ತಾನರ ಜನ್ಮದಿನದಂದು ಅವರ ದೇಶಪ್ರೇಮ, ತ್ಯಾಗ ಮತ್ತು ಜನಪರ ಆಡಳಿತವನ್ನು ನಾವೆಲ್ಲರೂ ಸ್ಮರಿಸೋಣ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

   ಸ್ವಾತಂತ್ರ್ಯ ಯೋಧ ಟಿಪ್ಪು ಸುಲ್ತಾನ್ -ಜಯಂತಿ, ಆಚರಣೆ ಅಗತ್ಯವೇನು?

   ಇದೇ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಬಿಜೆಪಿಯವರೇ ಟಿಪ್ಪುಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ ಹೊಗಳಿದ್ದರು. ಪುಸ್ತಕವನ್ನೂ ಬರೆಸಿದ್ದಾರೆ. ಈಗ ಅವರೇ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

   ಅವರ ಸರಣಿ ಟ್ವೀಟ್‌ಗಳಲ್ಲಿ ಏನಿದೆ ನೋಡಿ...

   ಆತ್ಮವಂಚನೆ ನಿಲುವು

   ಬಿಜೆಪಿ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ. ತಾವು ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ-ಹೊಗಳಿ, ಪುಸ್ತಕ ಬರೆಸಿ ಈಗ ವಿರೋಧಿಸುತ್ತಿರುವುದು ಸ್ವಾರ್ಥರಾಜಕಾರಣವಲ್ಲದೆ ಮತ್ತೇನು? ಎಂದು ಟೀಕಿಸಿದ್ದಾರೆ.

   ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ

   ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ.ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ? ಎಂದು ಪ್ರಶ್ನಿಸಿದ್ದಾರೆ.

   ಟಿಪ್ಪು ಹೆಸರು ಹೇಳಿದರೆ ಮಂಗಳೂರಿನ ಕ್ರೈಸ್ತರ ರಕ್ತ ಕುದಿಯುವುದೇಕೆ?

   ಜಾತಿಗಳಿಗೆ ಸೀಮಿತ

   ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು.

   ಲಾವಣಿಗಳಿಂದ ತಿಳಿದುಕೊಳ್ಳಿ

   ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಅಭಿಪ್ರಾಯಪಟ್ಟಿದ್ದಾರೆ.

   ಟಿಪ್ಪು ಜಯಂತಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಕ್ಕರ್ ಹಾಕಿದ್ದೇಕೆ?

   ಯಾವ ಗುಂಪಿಗೆ ಸೇರಿಸುತ್ತಾರೆ?

   ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ.

   ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ,ವೀರ ಸಿಂಧೂರ ಲಕ್ಷ್ಮಣ,ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ? ಎಂದು ವಿರೋಧಿಗಳನ್ನು ಪ್ರಶ್ನಿಸಿದ್ದಾರೆ.

   ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ

   ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ ಎಂದು ಸಮರ್ಥಿಸಿಕೊಂಡರು.

   ಕನ್ನಡಕ ಕಳಚಿಟ್ಟು ನೋಡಿ

   ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ. ಇದಕ್ಕಾಗಿ ಬಿಜೆಪಿ ಸರ್ಕಾರವೇ ಪ್ರಕಟಿಸಿದ ಪುಸ್ತಕ ಓದಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

   English summary
   Former Chief Minister Siddaramaiah defended Tippu Jayanti celebration by state government. He criticized BJP for opposing it.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X