ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಖಚಿತ! ಆ ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧೆ ಮಾಡಲ್ಲ ಎಂದ ಯತೀಂದ್ರ !

ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಹುಡುಕಾಟದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದು, ಹೈಕಮಾಂಡ್‌ ಸೂಚನೆಯಂತೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗೆ ವೇದಿಕೆ ರೆಡಿಯಾಗುತ್ತಿದೆ.

ಮೈಸೂರು,ಮಾರ್ಚ್20:‌ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿರೋಧ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟವೇ ದೊಡ್ಡ ಗೊಂದಲವಾಗಿದೆ.

ಈಗಾಗಲೇ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಗೆ ರೆಡಿಯಾಗಿದ್ದ ಸಿದ್ದರಾಮಯ್ಯ ಗೆ ಹೈಕಮಾಂಡ್‌ ಕ್ಷೇತ್ರ ಬದಲಾಯಿಸುವಂತೆ ಸೂಚನೆ ನೀಡಿದ್ರು. ಇನ್ನೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೊಟ್ಟ ಸಲಹೆ ಹಿನ್ನೆಲೆ ಆಧಾರದ ಮೇಲೆ ರಾಜ್ಯ ನಾಯಕರ ಜೊತೆಗೆ ಚರ್ಚಿಸಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿದ್ದಾರೆ.

Former CM Siddaramaiah Likely To Contest From Varuna Constituency

ಹೌದು, ಕೋಲಾರ ಕ್ಷೇತ್ರದಿಂದ ಸ್ಪರ್ಧೆಗೆ ರೆಡಿಯಾಗಿದ್ದ ಸಿದ್ದರಾಮಯ್ಯ ಇದೀಗ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧಾರಿಸಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ನಡೆದ ಸಭೆಯಲ್ಲಿ ಕೋಲಾರದಿಂದ ಸ್ಪರ್ಧೆ ವಿಚಾರವಾಗಿ ಯಾವುದೇ ಮಾತುಕತೆ ನಡೆದಿಲ್ಲ ಎಂದಿದ್ದ ಸಿದ್ದರಾಮಯ್ಯ, ಆ ಸಭೆಯ ಬಳಿಕ ರಾಹುಲ್‌ ಗಾಂಧಿಯೊಂದಿಗೆ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ವರುಣಾ ದಿಂದ ಸ್ಪರ್ದಿಸುವಂತೆ ರಾಹುಲ್‌ ಗಾಂಧಿ ಸೂಚನೆ ನೀಡಿದ್ಧಾರೆ.

ಇನ್ನೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಬೇಡವೆಂದು ಹೈಕಮಾಂಡ್‌ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವನ್ನು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಎರಡ್ಮೂರು ದಿನಗಳಲ್ಲಿ ನಮ್ಮ ತಂದೆ (ಸಿದ್ದರಾಮಯ್ಯ) ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ತಮ್ಮ ನಿರ್ಧಾರ ತಿಳಿಸಿಲಿದ್ದಾರೆ. ಹೈ ಕಮಾಂಡ್ ಕೋಲಾರದಿಂದ ಕ್ಷೇತ್ರದಿಂದ ಸ್ಪರ್ಧೇ ಮಾಡದಂತೆ ಸಲಹೆ ನೀಡಿದ್ದಾರೆ. ಹೀಗಾಗಿ, ಹೈಕಮಾಂಡ್ ಮಾತು ಕೇಳಬೇಕಾಗುತ್ತದೆ ಎಂದಿದ್ದಾರೆ.

Former CM Siddaramaiah Likely To Contest From Varuna Constituency

ಇನ್ನೂ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಹೈಕಮಾಂಡ್ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಹೈಕಮಾಂಡ್‌ ಹೇಳಿದಂತೆ ಕೇಳಬೇಕು. ಇದರ ಬಗ್ಗೆ ತಂದೆ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ನಾನು ಸಹ ಎರಡು ಬಾರಿ ಆತಂರಿಕ ಸಮೀಕ್ಷೆ ಮಾಡಿಸಿದ್ದೇನೆ. ಆ ಎರಡು ಸರ್ವೆಯಲ್ಲಿ ಸಿದ್ದರಾಮಯ್ಯ ಪರವಾಗಿ ರಿಸಲ್ಟ್ ಬಂದಿದೆ. ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ‌ ಗೆಲ್ಲುತ್ತಾರೆ. ಅವರಿಗೆ ಬಹು ಕ್ಷೇತ್ರ ಆಯ್ಕೆಗೆ ಅವಕಾಶ ಇರುವುದೇ ತೊಂದರೆ ಆಗಿರೋದು. ಒಂದು ವೇಳೆ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಬಂದರೆ ನಾನು ಬಿಟ್ಟು ಕೊಡುವೆ. ನಾನು ಬೇರೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಲ್ಲ ಎಂದು ಖಚಿತ ಪಡಿಸಿದ್ದಾರೆ. ಇನ್ನೂ ನಾನು ಬೇರೆ ಕ್ಷೇತ್ರವಾದರೂ ಅಲ್ಲಿನ ಸ್ಥಳೀಯ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಾರೆ ಹಾಗೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ದೃಷ್ಠಿಯಿಂದಾಗಿ ವರುಣಾ ಕ್ಷೇತ್ರವನ್ನ ಬಿಟ್ಟು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಕಷ್ಟು ತಯಾರಿ ನಡೆಸಿದ್ರು, ಆದರೆ, ಹೈಕಮಾಂಡ್‌ ಕೊಟ್ಟ ಸೂಚನೆಯ ಬಳಿಕ ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಇನ್ನೂ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಬೇಕು ಎಂದು ಕೋಲಾರ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಇತ್ತ ಕ್ಷೇತ್ರ ಬಿಟ್ಟುಕೊಟ್ಟಿರುವ ಶ್ರೀನಿವಾಸ್‌ ಗೌಡ, ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದರೇ ನಾನು ಅವರ ಪರವಾಗಿ ಕೆಲಸ ಮಾಡುತ್ತೇನೆ. ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡಲಿಲ್ಲ ಅಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಶ್ರೀನಿವಾಸ್‌ ಗೌಡ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+