ರಾಹುಲ್ ಗಾಂಧಿ ಭೇಟಿಯಾದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ

Recommended Video

      ರಾಹುಲ್ ಗಾಂಧಿ ಹಾಗು ಸಿದ್ದರಾಮಯ್ಯ ಭೇಟಿ | Oneindia Kannada

      ಬೆಂಗಳೂರು, ಜುಲೈ 23 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

      ಸೋಮವಾರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಯಾದರು. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರು ಆಗಿರುವ ಸಿದ್ದರಾಮಯ್ಯ ರಾಜ್ಯದ ವಿದ್ಯಮಾನಗಳ ಕುರಿತು ಮಾಹಿತಿ ನೀಡಿದರು.

      ಸುಮಾರು 30 ನಿಮಿಷಗಳ ಕಾಲ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನಿಗಮ-ಮಂಡಳಿಗಳ ನೇಮಕ, ಸಚಿವ ಸಂಪುಟದಲ್ಲಿ ಬಾಕಿ ಉಳಿದಿರುವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

      Former CM Siddaramaiah meets Rahul Gandhi

      ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿನ ನಡೆಯುತ್ತಿರುವ ವಿದ್ಯಮಾನ, ಪಕ್ಷಸಂಘಟನೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ.

      ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಹಲವು ಜಿಲ್ಲೆಗಳಲ್ಲಿ ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ. ರಾಜ್ಯದ ನಾಯಕರಿಗೆ ಈ ಕುರಿತು ಮಾಹಿತಿ ನೀಡಿದ್ದರು. ಈ ವಿಚಾರವನ್ನು ಸಹ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+