ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಗ್ಲಿಷ್ ಮಾಧ್ಯಮದ ಶಿಕ್ಷಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ

|
Google Oneindia Kannada News

ಬೆಂಗಳೂರು, ಡಿಸೆಂಬರ್ 27: ಮುಂದಿನ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭ ಮಾಡುವ ರಾಜ್ಯ ಸರ್ಕಾರದ ಚಿಂತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತದ ಶೈಕ್ಷಣಿಕ ವರ್ಷ ಮುಗಿದ ಬಳಿಕ 2019-20ನೇ ಸಾಲಿನಿಂದ ಸುಮಾರು 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದರು. ಅದಕ್ಕೆ ವಿವಿಧ ವಲಯಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ, ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರು.

ಎರಡು ರಾಜ್ಯದ ಮಕ್ಕಳು ಬರುವ ಒಂದು ಕನ್ನಡ ಶಾಲೆಯ ಕಥೆಎರಡು ರಾಜ್ಯದ ಮಕ್ಕಳು ಬರುವ ಒಂದು ಕನ್ನಡ ಶಾಲೆಯ ಕಥೆ

ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದರಿಂದ ಮಕ್ಕಳ ಶೈಕ್ಷಣಿಕ ಏಳ್ಗೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಟ್ವೀಟ್ ಮಾಡುವ ಜೊತೆಗೆ ತಮ್ಮನ್ನೇ ಉದಾಹರಣೆಯನ್ನಾಗಿ ನೀಡಿದ್ದಾರೆ.

former CM siddaramaiah opposed planning of 1000 english medium schools

ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರೊಡನೆ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮಿಳುನಾಡಲ್ಲಿ 61 ವರ್ಷಗಳಿಂದ ತಾಯ್ನಾಡಿನ ಪ್ರೀತಿ ಮೆರೆಯುತ್ತಿರುವ ಕನ್ನಡ ಶಾಲೆತಮಿಳುನಾಡಲ್ಲಿ 61 ವರ್ಷಗಳಿಂದ ತಾಯ್ನಾಡಿನ ಪ್ರೀತಿ ಮೆರೆಯುತ್ತಿರುವ ಕನ್ನಡ ಶಾಲೆ

ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.‌ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಖಾರವಾಗಿ ಹೇಳಿದ್ದಾರೆ.

English summary
Former Chief Minister Siddaramaiah expressed his unhappiness on the state government decision to start 1000 english medium schools from the next academical year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X