ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸಿದ್ದರಾಮಯ್ಯ ವಿರೋಧ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02: ಗೋ ಹತ್ಯೆ ವಿಚಾರದಲ್ಲಿ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗೋಹತ್ಯೆ ಕಾಯ್ದೆ ಜಾರಿಗೆ ತರುವುದಾಗಿ ಸರ್ಕಾರದ ಕೆಲ ಸಚಿವರು ಹಾಗೂ ಬಿಜೆಪಿಯ ಕೆಲ ನಾಯಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಹಲವು ಮುಖಂಡರು ಮಂಗಳವಾರ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಸಂಪುಟ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆಯನ್ನು ಡಿಸೆಂಬರ್ 7ರಿಂದ ಆರಂಭಗೊಳ್ಳುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂಬುದನ್ನು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.

Former CM Siddaramaiah Opposed To Karnataka Govts Stringent Anti-Cow Slaughter Law

ಜಾನುವಾರುಗಳ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಷ್ಕೃತ ಮತ್ತು ಸಮಗ್ರ ಮಸೂದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಕ್ಕೆ ಸಂಪುಟ ಅನುಮೋದನೆ ನೀಡಿದೆ.

ಗೋಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಒಪ್ಪಗೆಗಾಗಿ ಕೇಂದ್ರ ಸರ್ಕಾರಕ್ಕೆ ರವಾನಿಸಿತ್ತು. ಆದರೆ ಆಗಿನ ಯುಪಿಎ ಸರ್ಕಾರ ಮಸೂದೆಯನ್ನು ತಿರಸ್ಕರಿಸಿತ್ತು. ಈಗ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.

English summary
The Congress party will oppose the anti-cow slaughter bill here for the sake of those who depend on beef for their livelihood, according to Siddaramaiah, leader of the Opposition in the Karnataka Legislative Assembly on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X