• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2ನೇ ಡೋಸ್ ಕೊರೊನಾ ಲಸಿಕೆ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

|

ಬೆಂಗಳೂರು, ಏಪ್ರಿಲ್ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವುದರ ನಡುವೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊವಿಡ್-19 ಎರಡನೇ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಕೊವಿಡ್-19 ಮಹಾಮಾರಿ ಹರಡುವಿಕೆ ವೇಗ ಹೆಚ್ಚುತ್ತಿರುವುದು ಜನರಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಕಳೆದೊಂದು ದಿನದಲ್ಲಿ 1,33,077 ಜನರಿಗೆ ಲಸಿಕೆ ನೀಡಲಾಗಿದ್ದು, ಈವರೆಗೂ 92,40,078 ಫಲಾನುಭವಿಗಳಿಗೆ ಕೊರೊನಾವೈರ್ ಲಸಿಕೆ ನೀಡಲಾಗಿದೆ.

ಲಸಿಕೆಯ 2 ಡೋಸ್ ಪಡೆದ ಹಿರಿಯರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆಲಸಿಕೆಯ 2 ಡೋಸ್ ಪಡೆದ ಹಿರಿಯರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಶೇ.94ರಷ್ಟು ಕಡಿಮೆ

ಕಳೆದ 24 ಗಂಟೆಗಳಲ್ಲಿ 39,047 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 229 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 11833 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 14,39,822 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 10,95,883 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 15036 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 3,28,884 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಹಾಟ್ ಸ್ಪಾಟ್ ಆಗಿರುವ ಬೆಂಗಳೂರು:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಬೆಂಗಳೂರು ಹೆಚ್ಚು ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಪ್ರತಿನಿತ್ಯ ರಾಜ್ಯದ ಶೇ.60ರಷ್ಟು ಹೊಸ ಪ್ರಕರಣಗಳು ಬೆಂಗಳೂರು ನಗರದಲ್ಲೇ ಪತ್ತೆಯಾಗುತ್ತಿವೆ. ಕಳೆದ ಒಂದು ದಿನದಲ್ಲಿ 22,596 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 137 ಮಂದಿ ಪ್ರಾಣ ಬಿಟ್ಟಿದ್ದು, ಈವರೆಗೂ 66139 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ., ಬೆಂಗಳೂರಿನಲ್ಲಿ 2,24,152 ಸಕ್ರಿಯ ಪ್ರಕರಣಗಳಿವೆ.

   ಬೆಂಗಳೂರಿನ 3 ಸಾವಿರ ಸೋಂಕಿತರು ನಾಪತ್ತೆ! ಹಳ್ಳಿಗಳಿಗೆ ತೆರಳಿದ್ದರೆ ಅಪಾಯ ಕಟ್ಟಿಟ್ಟಬುತ್ತಿ.. | Oneindia Kannada
   English summary
   Former CM Siddaramaiah Receives The Second Dose Of COVID-19 Vaccine In Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X