Get Updates
Get notified of breaking news, exclusive insights, and must-see stories!

ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಫೆಬ್ರವರಿ 20: ಈ ವರ್ಷ ನಿರಂತರವಾಗಿ ಸುರಿದ ಮಳೆಯಿಂದಾಗಿ 4.5 ಲಕ್ಷ ಟನ್ ರಾಗಿಯು ಮಳೆಯ ಪಾಲಾದರೂ 15 ಲಕ್ಷ ಟನ್ ರಾಗಿ ರೈತರ ಕೈಯಲ್ಲಿದೆ, ಹಾಗಾಗಿ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ. ರಾಗಿ ಖರೀದಿ ಮೇಲಿನ ನಿರ್ಬಂಧ ತೆರವುಗೊಳಿಸಿ ಎಂದು ಮನವಿ ಮಾಡಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ.

"ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ," ಎಂದು ಹೇಳಿದ್ದಾರೆ.

"ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 19.35 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಎಕರೆಗೆ ಕನಿಷ್ಟ 1 ಟನ್ ಎಂದರೂ ಸುಮಾರು 19.3 ಲಕ್ಷ ಟನ್ ಟನ್ ರಾಗಿ ಇಳುವರಿ ಬರುತ್ತದೆ. ಈ ವರ್ಷ ನಿರಂತರವಾಗಿ ಸುರಿದ ಮಳೆಯಿಂದಾಗಿ 4.5 ಲಕ್ಷ ಟನ್ ರಾಗಿಯು ಮಳೆಯ ಪಾಲಾದರೂ 15 ಲಕ್ಷ ಟನ್ ರಾಗಿ ರೈತರ ಕೈಯಲ್ಲಿದೆ, ಹಾಗಾಗಿ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿದ್ದಾರೆ," ಎಂದು ಉಲ್ಲೇಖ ಮಾಡಿದ್ದಾರೆ.

 ರೈತರ ಆದಾಯ ಹೆಚ್ಚಾಗುವ ಬದಲು ಕಡಿಮೆಯಾಗುತ್ತಿದೆ

ರೈತರ ಆದಾಯ ಹೆಚ್ಚಾಗುವ ಬದಲು ಕಡಿಮೆಯಾಗುತ್ತಿದೆ

"ಸರ್ಕಾರಗಳು ಪದೇ ಪದೇ ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಹೇಳಲಾಗುತ್ತದೆ. ಆದರೆ ರೈತರ ಆದಾಯ ಹೆಚ್ಚಾಗುವ ಬದಲು ಕಡಿಮೆಯಾಗುತ್ತಿದೆ. ಅದರಲ್ಲೂ ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆಯುವ ರಾಗಿಯು ಲಾಭದಾಯಕ ಬೆಳೆಯಲ್ಲ. ಖರ್ಚು ಹೆಚ್ಚು ಲಾಭ ಕಡಿಮೆ. ಹಾಗಾಗಿ ಸರ್ಕಾರಗಳು ಈ ರೀತಿಯ ಬೆಳೆಗಳಿಗೆ ಹೆಚ್ಚು ಬೆಲೆಯನ್ನು ನಿಗಧಿಪಡಿಸಿ ರೈತರು ಮಾರುಕಟ್ಟೆಗೆ ತರುವಷ್ಟು ಉತ್ಪನ್ನವನ್ನೂ ಖರೀದಿಸಬೇಕು. ರಾಗಿ, ಜೋಳದಂಥ ಮಳೆಯಾಶ್ರಿತ ಬೆಳೆಗಳನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ, ಏಕೆಂದರೆ ಈ ಬೆಳೆಗಳು ಹೆಚ್ಚು ನೀರನ್ನು ಬಯಸುವುದಿಲ್ಲ. ಸರ್ಕಾರಗಳು ಈ ರೈತರಿಗೆ ಸಬ್ಸಿಡಿಗಳನ್ನೇನೂ ನೀಡುತ್ತಿಲ್ಲ. ಈ ಬೆಳೆಗಳನ್ನು ಬೆಳೆಯುವುದರಿಂದ ನಿಸರ್ಗದ ರಕ್ಷಣೆಯೂ ಆಗುತ್ತದೆ. ಔಷಧ, ಕೀಟನಾಶಕ, ರಾಸಾಯನಿಕಗಳಿಲ್ಲದೆ ಬೆಳೆಯುವ ರಾಗಿ, ಜೋಳ ಮುಂತಾದ ಬೆಳೆಗಳು ನಿಸರ್ಗಸ್ನೇಹಿಯಾಗಿವೆ. ಹಾಗಾಗಿ ಇವುಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು," ಎಂದು ಆಗ್ರಹ ಮಾಡಿದ್ದಾರೆ.

 ರಾಗಿಗೆ ಈಗ ದೊರೆಯುತ್ತಿರುವ ಬೆಲೆ ಸಾಲದು

ರಾಗಿಗೆ ಈಗ ದೊರೆಯುತ್ತಿರುವ ಬೆಲೆ ಸಾಲದು

"ಆದರೆ ರಾಗಿಗೆ ಈಗ ದೊರೆಯುತ್ತಿರುವ ಬೆಲೆಯು ಯಾವುದಕ್ಕೂ ಸಾಲುವುದಿಲ್ಲ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಒಂದು ಕ್ವಿಂಟಾಲಿಗೆ 3295 ರೂ ನೀಡುತ್ತಿದ್ದರೆ ಈ ವರ್ಷ 3377 ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ರೈತರು 2019-20 ರಲ್ಲಿ ಟ್ರಾಕ್ಟರ್‍ನಲ್ಲಿ ಒಂದು ಗಂಟೆ ಹೊಲ ಉಳಲು 750 ರೂಪಾಯಿ ನೀಡುತ್ತಿದ್ದರೆ ಈ ವರ್ಷ 1250-1300 ರೂ ನೀಡಬೇಕಾಗಿದೆ. ಬೆಳೆಯನ್ನು ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗಧಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ," ಎಂದಿದ್ದಾರೆ.

 ರೈತರಿಂದ ರಾಗಿ ಖರೀದಿಸಲು ಬಿಜೆಪಿ ಸರ್ಕಾರದಿಂದ ನಿಬಂಧನೆ

ರೈತರಿಂದ ರಾಗಿ ಖರೀದಿಸಲು ಬಿಜೆಪಿ ಸರ್ಕಾರದಿಂದ ನಿಬಂಧನೆ

"ಆದರೂ ರೈತರು ನಿಗಧಿಪಡಿಸಿರುವ ಬೆಂಬಲ ಬೆಲೆಯಾದರೂ ತಮ್ಮ ಬೆಳೆಗಳಿಗೆ ಸಿಗಲಿ ಎಂದು ಆಶಿಸುತ್ತಿದ್ದಾರೆ. ಏಕೆಂದರೆ ಮುಕ್ತ ಮಾರುಕಟ್ಟೆಯಲ್ಲಿ ರಾಗಿಯ ಬೆಲೆ ಪ್ರತಿ ಕ್ವಿಂಟಾಲಿಗೆ 1800 ರೂಪಾಯಿಗಳಿಂದ 2180 ರೂಪಾಯಿಗಳಷ್ಟೆ ಇದೆ. ಪ್ರಧಾನಿ ಮೋದಿಯವರ ಸರ್ಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧರಿಸಿ ರಾಜ್ಯದ ಬಿಜೆಪಿ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಸಣ್ಣ ರೈತರಿಂದ ಮಾತ್ರ ಕೇವಲ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ. ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ," ಎಂದು ತಿಳಿಸಿದ್ದಾರೆ.

 ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಿ

ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಿ

"ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ. ರೈತರು 15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಬಿದ್ದು ಹೋಗುತ್ತವೆ. ಹೀಗಾದರೆ ರೈತರ ಹಿತಾಸಕ್ತಿಯನ್ನು ಕಾಪಾಡುವುದು ಹೇಗೆ? ರೈತರ ಆದಾಯ ದ್ವಿಗುಣಗೊಳ್ಳುವುದು ಹೇಗೆ? ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದನ್ನು ನಿಲ್ಲಿಸಿರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ಈಗಾಗಲೆ ರಾಗಿಯ ಬೆಲೆ ಕಡಿಮೆಯಾಗಿ ಈಗ ಕೇವಲ 1800 ರೂಗಳಿಂದ 2180 ರೂವರೆಗೆ ಮಾತ್ರ ಮಾರಾಟವಾಗುತ್ತಿದೆ. ಇದರಿಂದ ಪ್ರತಿ ಕ್ವಿಂಟಾಲ್‍ಗೆ ರೈತರಿಗೆ ಸರಾಸರಿ 1377 ರೂಗಳಷ್ಟು ನಷ್ಟವಾಗುತ್ತಿದೆ. ಈ ಲೆಕ್ಕದಲ್ಲಿ ನೋಡಿದರೆ ಮಾರುಕಟ್ಟೆಗೆ 8 ಲಕ್ಷ ಟನ್ ರಾಗಿ ಬಂದರೆ 2.1 ಲಕ್ಷ ಟನ್ನನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಉಳಿಕೆ 6 ಟನ್ ರಾಗಿ ಬೆಳೆದ ರೈತರಿಗೆ ಕನಿಷ್ಟ 1000 ಕೋಟಿ ನಷ್ಟವಾಗುತ್ತದೆ," ಎಂದಿದ್ದಾರೆ.

"ಆದ್ದರಿಂದ ಈ ಕೂಡಲೆ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ ತರುತ್ತಾರೊ ಅಷ್ಟನ್ನೂ ಖರೀದಿಸಬೇಕು. ಇಂದೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು. ರಾಗಿ, ಭತ್ತ ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕು," ಎಂದು ಸಿದ್ಧರಾಮಯ್ಯ ಆಗ್ರಹ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

Recommended Video

      ಮುದ್ದಾದ ವಿಡಿಯೋ ಹಂಚಿಕೊಂಡ ಶಿಖರ್ ಧವನ್ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+