ಮಾಜಿ ಸಚಿವ ಬಿ.ನಾಗೇಂದ್ರ ಜೈಲಿನಿಂದ ರಿಲೀಸ್‌!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್‌ ಮಾಜಿ ಸಚಿವ ಬಿ.ನಾಗೇಂದ್ರ ಅವರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದ ನಾಗೇಂದ್ರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮೊನ್ನೆ ಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು. ಇದರಿಂದ ಆಗ ಸಚಿವರೂ ಆಗಿದ್ದ ಬಿ.ನಾಗೇಂದ್ರ ಅವರ ಪಾತ್ರವಿದೆ ಎಂದು ಹೇಳಲಾಗಿತ್ತು. ಈ ಆರೋಪದ ಮೇರೆಗೆ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

Former Congress Minister B Nagendra Was Released From Jail Today

ಇಡಿ ಅಧಿಕಾರಿಗಳು ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಕೂಡ ಸಿದ್ಧಪಡಿಸಿದ್ದರು. ಇದರಲ್ಲಿ ನಾಗೇಂದ್ರ ಅವರೇ ಆರೋಪಿ ಎಂಬುದಕ್ಕೆ ಹಲವು ಸಾಕ್ಷಿಗಳನ್ನು ಸಹ ಒದಗಿಸಿದ್ದರು. ಇದರ ನಡುವೆಯೇ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ನಲ್ಲಿ ರಿಲೀಫ್‌ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಬಿ.ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಾಗೇಂದ್ರ ಅವರಿಗೆ 2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಕೋರ್ಟ್‌ ಸೂಚನೆ ನೀಡಿ ಜಾಮೀನು ನೀಡಿದೆ. ಹಗರಣದಲ್ಲಿ ನಾಗೇಂದ್ರ ಅವರ ಬಂಧನವಾಗಿತ್ತು. ಈ ಆರೋಪದ ಮೇರೆಗೆ ಆಗ ಸಚಿವ ಸ್ಥಾನದಲ್ಲಿದ್ದ ಅವರು ರಾಜೀನಾಮೆ ನೀಡಿದ್ದರು.

ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿಬಂದ ಬಳಿಕ ಇದಕ್ಕೆ ಸಂಬಂಧಿಸಿ ಸಾಕ್ಷಿಗಳು ಸಿಕ್ಕ ಹಿನ್ನೆಲೆ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಜಾರಿ ನಿರ್ದೇಶಾನಾಲಯದ (ಇಡಿ) ಅಧಿಕಾರಿಗಳು, ಇತ್ತೀಚೆಗಷ್ಟೇ ಚಾರ್ಜ್‌ಶೀಟ್ ಸಲ್ಲಿಸಿದ್ದರು.

Former Congress Minister B Nagendra Was Released From Jail Today

ನಿಗಮದಲ್ಲಿ ಬರೋಬ್ಬರಿ 187 ಕೋಟಿ ರೂಪಾಯಿಯಷ್ಟು ಹಗರಣ ನಡೆದಿದೆ ಎಂಬ ಆರೋಪವಿದೆ. ಇದಕ್ಕೆ ಸಂಬಂಧಿಸಿ ನಾಲ್ಕು ಸಾವಿರ ಪುಟಗಳ ಚಾರ್ಜ್‌ಶೀಟ್ ಕೂಡ ಸಲ್ಲಿಕೆಯಾಗಿದೆ. ಇನ್ನು ಇಡಿ ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಎ1 ಆರೋಪಿ ಎನ್ನಲಾಗಿದ್ದು, ಹಗರಣದಲ್ಲಿ ಬಿ.ನಾಗೇಂದ್ರ ಅವರೇ ಮುಖ್ಯಪಾತ್ರಧಾರಿ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿತ್ತು.

ಈ ಹಗರಣದಲ್ಲಿ ಬಿ.ನಾಗೇಂದ್ರ ಅವರೇ ಮಾಸ್ಟರ್‌ ಮೈಂಡ್‌ ಎಂದೂ ಇಡಿ ಹೇಳಿತ್ತು. ನಿಗಮದ ಹಣವನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗಾಗಿ ಬಳಸಿಕೊಳ್ಳಲಾಗಿದೆ ಎನ್ನುವ ಗಂಭೀರ ಅಂಶವನ್ನೂ ಚಾರ್ಜ್‌ಶೀಟ್‌ನಲ್ಲಿ ಇಡಿ ಉಲ್ಲೇಖಿಸಿದೆ.

ನಿಗಮದ ಹಣವನ್ನು ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದ ಬೇರೆ ಬೇರೆ ನಕಲಿ ಖಾತೆಗಳಿಗೆ ವರ್ಗಾಯಿಸಿ, ನಂತರ ಶೆಲ್ ಘಟಕಗಳ ಮೂಲಕ ಹಣ ಹಂಚಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಹಗರಣ ಬೆಳಕಿಗೆ ಬಂದಿದೆ ಎಂದು ಇಡಿ ಹೇಳಿದೆ. ಈ ಬೆಳವಣಿಗೆಯ ನಡುವೆಯೇ ನಾಗೇಂದ್ರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+