ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನ
ಕೋಲಾರ, ನವೆಂಬರ್ 11: ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ಸಿ.ವೆಂಕಟೇಶಪ್ಪ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಸಿ.ವೆಂಕಟೇಶಪ್ಪ ಅವರು ಅಪಾರ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸಿ.ವೆಂಕಟೇಶಪ್ಪ ಬಂಗಾರಪೇಟೆ ತಾಲೂಕಿನ ಬುವನಹಳ್ಳಿ ಗ್ರಾಮದವರು, ಈಗಾಗಲೇ ಪಾರ್ಥಿವ ಶರೀರವನ್ನ ಸ್ವಗ್ರಾಮಕ್ಕೆ ತರಲಾಗಿದ್ದು, ವೆಂಕಟೇಶಪ್ಪ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಬಲಿಗರು ಹಾಗೂ ಸಾರ್ವಜನಿಕರು ಪಾರ್ಥೀವ ಶರೀರದ ದರ್ಶನ ಪಡೆದಿದ್ದಾರೆ.

ಕಾಂಗ್ರೆಸ್ ನ ಹಿರಿಯ ಮುಖಂಡರಾದ ಸಿ.ವೆಂಕಟೇಶಪ್ಪ ಅವರು ಮೂರು ಬಾರಿ ಶಾಸಕರಾಗಿದ್ದರು. ಆಗಿನ ಬೇತಮಂಗಲ ವಿಧಾನಸಭಾ ಕ್ಷೇತ್ರದಿಂದ 1978, 1983, 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಿ. ವೆಂಕಟೇಶಪ್ಪ ಅವರಿಗೆ 73 ವರ್ಷ ವಯಸ್ಸಾಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನ ಅಗಲಿದ್ದಾರೆ.












Click it and Unblock the Notifications