ಅಧಿಕೃತವಾಗಿ ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ ಮಾಲಿಕಯ್ಯ ಗುತ್ತೇದಾರ್
ಮುಂಬೈ, ಏಪ್ರಿಲ್ 8: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ಹಲವು ಶಾಸಕರನ್ನು ತನ್ನ ಪಕ್ಷದ ಒಳಕ್ಕೆ ಎಳೆದುಕೊಂಡಿದ್ದ ಕಾಂಗ್ರೆಸ್ ಅಧಿಕೃತವಾಗಿ ತನ್ನ ಮೊದಲ ವಿಕೆಟ್ ಕಳೆದುಕೊಂಡಿದೆ.
ಕಲಬುರಗಿಯ ಅಫಜಲ್ಪುರ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮಾಲಿಕಯ್ಯ ಗುತ್ತೇದಾರ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಹಲವು ದಿನಗಳ ಹಿಂದೆಯೇ ಬಿಜೆಪಿ ತೊರೆಯುವುದಾಗಿ ಹೇಳಿದ್ದ 6 ಬಾರಿಯ ಶಾಸಕ ಮಾಲಿಕಯ್ಯ ಗುತ್ತೇದಾರ್ ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಮಲ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಮುರಳೀಧರ್ ರಾವ್ ಸಮ್ಮುಖದಲ್ಲಿ ಅವರು ಪಕ್ಷ ಸೇರಿದರು.
2004ರಲ್ಲಿ ಒಮ್ಮೆ ಸೋಲು ಕಂಡಿದ್ದು ಬಿಟ್ಟರೆ 1985, 89, 94, 99, 2008, 2013 ಹೀಗೆ ಒಟ್ಟು ಆರು ಬಾರಿ ಬೇರೆ ಬೇರೆ ಪಕ್ಷಗಳಿಂದ ಅವರು ಗೆಲುವು ಕಂಡಿರುವುದು ವಿಶೇಷ.

ಇದೇ ಸಂದರ್ಭದಲ್ಲಿ ಯಾದಗಿರಿ ನಗರ ಪಾಲಿಕೆ ಅಧ್ಯಕ್ಷೆ ಲಲಿತಾ ಅನ್ಪುರ್ ಕೂಡ ಬಿಜೆಪಿ ಪಕ್ಷ ಸೇರಿದರು.












Click it and Unblock the Notifications