ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಕರ್ನಾಟಕದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಿ ಮಕ್ಕಳಿಗೆ ಬಿಸಿಯೂಟ ನೀಡಲು ಇದೇ ಸಕಾಲ"

|
Google Oneindia Kannada News

ಬೆಂಗಳೂರು, ಅಕ್ಟೋಬರ್ 1: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದ ಹಿನ್ನೆಲೆ ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳನ್ನು ಪುನಾರಂಭಿಸಲಾಗಿದೆ. ಈ ಮಧ್ಯೆ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆರಂಭಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಜಿಲ್ಲೆಯಗಳಲ್ಲಿ ಪ್ರಾಥಮಿಕ ಶಾಲೆಗಳನ್ನೂ ಸಹ ಪುನಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅದರ ಜೊತೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡುವುದಕ್ಕೆ ಇದು ಸಕಾಲವಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ನರ್ಸರಿ ಶಾಲೆ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡುವೆ ಶೀತಲ ಸಮರ ನರ್ಸರಿ ಶಾಲೆ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡುವೆ ಶೀತಲ ಸಮರ

"ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮ ಪ್ರಾರಂಭಿಸುವುದಕ್ಕೆ ಇದು ಸಕಾಲ. ವಿಶೇಷವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳಿಗೆ ಇದು ತೀರಾ ಅವಶ್ಯಕವಾಗಿದೆ. ಸರ್ಕಾರ ಈ ಕುರಿತು ತುರ್ತು ನಿರ್ಣಯ ತೆಗೆದುಕೊಳ್ಳಬೇಕೆಂದು ನನ್ನ ಮನವಿ," ಎಂದು ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
"ಇದೀಗ ತಾನೆ ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಅವಶ್ಯಕತೆಯನ್ನು ವಿವರಿಸಿದ್ದೇನೆ. ಮುಖ್ಯಮಂತ್ರಿಗಳು ನನ್ನ ಮನವಿಗೆ ಸ್ಪಂದಿಸಿ ಈ ಕೂಡಲೇ ಅಗತ್ಯ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ," ಎಂದು ಮತ್ತೊಂದು ಟ್ವೀಟ್ ಮೂಲಕ ಸುರೇಶ್ ಕುಮಾರ್ ತಿಳಿಸಿದ್ದಾರೆ.

Former Education Minister S Suresh Kumar request Govt to Take Decision on Mid-Day Meals in Schools

ಕರ್ನಾಟಕದಲ್ಲಿ ದಸರಾ ನಂತರ ಪ್ರಾಥಮಿಕ ಶಾಲೆ ಪುನಾರಂಭ?:

ರಾಜ್ಯದಲ್ಲಿ ದಸರಾ ಹಬ್ಬದ ನಂತರದಲ್ಲಿ ಪ್ರಾಥಮಿಕ ಶಾಲೆಗಳನ್ನು ಪುನಾರಂಭಗೊಳಿಸುವ ಬಗ್ಗೆ ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 ಪಿಎಂ ಪೋಷಣ್ ವ್ಯಾಪ್ತಿಗೆ 11.20 ಲಕ್ಷ ಶಾಲೆ, 11.80 ಕೋಟಿ ಮಕ್ಕಳು ಪಿಎಂ ಪೋಷಣ್ ವ್ಯಾಪ್ತಿಗೆ 11.20 ಲಕ್ಷ ಶಾಲೆ, 11.80 ಕೋಟಿ ಮಕ್ಕಳು

ಕರ್ನಾಟಕದಲ್ಲಿ ಪ್ರಸ್ತುತ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಕೆ ಪ್ರಮಾಣ ಶೇ.1ಕ್ಕಿಂತ ಇಳಿಮುಖವಾಗಿದೆ. ಕೊರೊನಾವೈರಸ್ ಪಿಡುಗಿನ ಹಾವಳಿ ತಗ್ಗಿರುವ ರಾಜ್ಯದಲ್ಲಿ ಡೆಂಗ್ಯೂ ಹಾಗೂ ವೈರಲ್ ಜ್ವರ ಮಕ್ಕಳನ್ನು ಬಾಧಿಸುತ್ತಿದೆ. ಹೀಗಾಗಿ ದಸರಾ ವೇಳೆಗೆ ಈ ಸಾಂಕ್ರಾಮಿಕ ರೋಗಗಳು ನಿಯಂತ್ರಣಕ್ಕೆ ಬಂದರೆ ಶಾಲೆಗಳನ್ನು ಪುನರಾರಂಭಿಸಲಾಗುವುದು. ಆಗ ಪೋಷಕರೂ ತಮ್ಮ ಮಕ್ಕಳನ್ನು ನಿರಾಂತಕವಾಗಿ ಶಾಲೆಗಳಿಗೆ ಕಳುಹಿಸಬಹುದು ಸಚಿವರು ಹೇಳಿದ್ದಾರೆ.

Former Education Minister S Suresh Kumar request Govt to Take Decision on Mid-Day Meals in Schools

ಈಗಾಗಲೇ 5 ರಿಂದ 12ನೇ ತರಗತಿ ಶಾಲೆಗಳು ಪ್ರಾರಂಭ:

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 5 ರಿಂದ 12ನೇ ತರಗತಿವರೆಗೆ ಶಾಲೆಗಳನ್ನು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗಿದೆ. 1ರಿಂದ 5ನೇ ತರಗತಿವರೆಗಿನ ಶಾಲೆಗಳಲ್ಲಿಯೂ ಸಹ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆ ಸೇರಿ 35 ಲಕ್ಷಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರ ಭವಿಷ್ಯದ ಗತಿಯೇನು? ಕೂಡಲೇ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ.

ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸದಿದ್ದರೆ ಮುಂದೇನು ಗತಿ?

Recommended Video

#RememberingGandhiji: ಇಂದು 152 ನೇ ಗಾಂಧಿ ಜಯಂತಿ | Oneindia Kannada

ಪ್ರಾಥಮಿಕ ಶಾಳೆಗಳನ್ನು ಪ್ರಾರಂಭಿಸದ ಕಾರಣ ಮಕ್ಕಳು ಅಕ್ಷರ ಜ್ಞಾನ ಮರೆಯುತ್ತಿದ್ದಾರೆ. ಅಲ್ಲದೆ, ಮಕ್ಕಳು ಮನೆಯಲ್ಲಿ ಇರುವುದರಿಂದ ಬಾಲಕಾರ್ಮಿಕ, ಜೀತ ಪದ್ಧತಿಗೆ ದೂಡಲಾಗುತ್ತದೆ. ಬಾಲ್ಯ ವಿವಾಹಗಳೂ ಹೆಚ್ಚಾಗುತ್ತಿವೆ. ಮುಖ್ಯವಾಗಿ ಕೋವಿಡ್ ಕಾರಣದಿಂದ ಬಡ ಕುಟುಂಬಗಳು ಸಂಕಷ್ಟದಲಿದ್ದು, ಮಕ್ಕಳಿಗೆ ಮನೆಯಲ್ಲಿ ಸರಿಯಾದ ಪೌಷ್ಠಿಕಾಂಶದ ಊಟ ಸಿಗುತ್ತಿಲ್ಲ. ಆದ್ದರಿಂದ ಶಾಲೆಗಳನ್ನು ಪುನರಾರಂಭಿಸಿ ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಗಳನ್ನು ಆರಂಭಿಸಬೇಕು ಎಂಬ ಒತ್ತಡವೂ ಕೇಳಿಬರುತ್ತಿದೆ. ಶಾಲೆಗಳು ನಡೆಯದಿದ್ದರೆ ದುಡಿಯುವ ತಂದೆ-ತಾಯಿ ತಮ್ಮ ಮಕ್ಕಳನ್ನು ಎಲ್ಲಿ ಬಿಟ್ಟು ಹೋಗಬೇಕು ಎಂಬ ಪ್ರಶ್ನೆಯು ಹುಟ್ಟಿಕೊಂಡಿತ್ತು. ಪ್ರಾಥಮಿಕ ಶಾಲೆಗಳು ಪ್ರಾರಭವಾದರೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗುತ್ತದೆ ಎಂದು ಪೋಷಕರು ಆಗ್ರಹಿಸಿದ್ದರು.

English summary
Former Education Minister S Suresh Kumar request Govt to Take Decision on Mid-Day Meals in Schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X