ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್ ಚತುರ್ವೇದಿ ನಿಧನ

|
Google Oneindia Kannada News

ಬೆಂಗಳೂರು, ಜನವರಿ 06: ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್ ಚತುರ್ವೇದಿ ನಿಧನರಾಗಿದ್ದಾರೆ. ತ್ರಿಲೋಕ ನಾಥ ಚತುರ್ವೇದಿ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ನಿಧನರಾದರು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

Former Governor of Karnataka T.N Chaturvedi Passes Away

ಆಗಸ್ಟ್ 2002ರಿಂದ 20 ಆಗಸ್ಟ್ 2007ವರೆಗೆ ರಾಜ್ಯಪಾಲರಾಗಿದ್ದರು. ಇದಕ್ಕೂ ಮುನ್ನ ಭಾರತದ ಮಹಾಲೇಖಪಾಲರಾಗಿ 1984 ರಿಂದ 1989ರವರೆಗೆ ಕಾರ್ಯನಿರ್ವಹಿಸಿದ್ದರು. 1990ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಜನವರಿ 18, 1929ರಂದು ಜನಿಸಿದ ಚತುರ್ವೇದಿ ಅವರು 2004ರಲ್ಲಿ ಕೇರಳದ ರಾಜ್ಯಪಾಲರಾಗಿ ಕೂಡಾ ಕಾರ್ಯ ರ್ನಿವಹಿಸಿದ್ದರು. 2017ರಲ್ಲಿ ಭಾರತದ ರಾಷ್ಟ್ರಪತಿ ಹುದ್ದೆಗೆ ಚತುರ್ವೇದಿಗಳ ಹೆಸರು ಕೇಳಿ ಬಂದಿತ್ತು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಟಿ.ಎನ್ ಚತುರ್ವೇದಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ, ಉತ್ತಮ ಆಡಳಿತಗಾರರು, ನಿಜವಾದ ರಾಷ್ಟ್ರೀಯವಾದಿ ಎಂದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪರಿಂದ ಸಂತಾಪ:
ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಸಿ. ಎ. ಜಿ ಆಗಿ ಮತ್ತು ಕರ್ನಾಟಕದ ರಾಜ್ಯಪಾಲರಾಗಿ ಅತ್ಯಂತ ದಕ್ಷತೆಯಿಂದ ಕಾರ್ಯ ನಿರ್ವಹಿಸಿದವರು ಎಂದು ಅವರು ಸ್ಮರಿಸಿಕೊಂಡಿದ್ದಾರೆ.

ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

English summary
Former Governor of Karnataka T.N Chaturvedi Passes Away. He was Karnataka's governor from 2002 to 2007.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X